ಬೆಂಗಳೂರು: ಇಂದು ನ್ಯೂಜಿಲೆಂಡ್ ವಿರುದ್ಧ ನಡೆದ ಐಸಿಸಿ ಚಾಂಪಿಯನ್ ಟ್ರೋಪಿಯಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ ಜಯವನ್ನು ಸಾಧಿಸಿತು. ಟೀ ಇಂಡಿಯಾದ ಗೆಲುವನ್ನು ಇಡೀ ಭಾರತವೇ ಪಟಾಕಿ ಸಿಡಿಸಿ ಸಂಭ್ರಮಿಸಿದೆ.
ಈ ಮೂಲಕ ಮೂರನೇ ಭಾರೀ ಭಾರತ ಐಸಿಸಿ ಚಾಂಪಿಯನ್ ಟ್ರೋಪಿಯನ್ನು ಮುಡಿಗೇರಿಸಿಕೊಂಡಿತು. ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ 7ವಿಕೆಟ್ ಕಳೆದುಕೊಂಡು 252 ರನ್‌ಗಳ ಟಾರ್ಗೆಟ್ ಅನ್ನು ಭಾರತಕ್ಕೆ ನೀಡಿತು.
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ 4 ವಿಕೆಟ್ಗಳಿಂದ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸುವ ಮೂಲಕ 2025ರ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.