ICC Champion Trophy: ನಿವೃತ್ತಿ ಅಂಚಿನಲ್ಲಿರುವ ರೋಹಿತ್‌ಗೆ ನಾಳಿನ ಪಂದ್ಯವೇ ನಿರ್ಣಾಯಕ

Sampriya
ಶನಿವಾರ, 8 ಮಾರ್ಚ್ 2025 (14:51 IST)
Photo Courtesy X
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಸೋತ ನಂತರ ರೋಹಿತ್ ಶರ್ಮಾ ಅವರ ಭವಿಷ್ಯ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. 38ವರ್ಷದ ರೋಹಿತ್ ಶರ್ಮಾ ಅವರು ಈಗಾಗಲೇ ಟಿ20ಐ ಸ್ವರೂಪದಿಂದ ನಿವೃತ್ತಿ ಹೊಂದಿದ್ದಾರೆ.

2024 ರ ಟಿ20 ವಿಶ್ವಕಪ್ ಗೆಲುವಿನ ನಂತರ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಕೇವಲ ಟೆಸ್ಟ್ ಹಾಗೂ ಟಿ ಟ್ವೆಂಟಿ ಸ್ವರೂಪಗಳತ್ತ ಗಮನಹರಿಸಲು ನಿರ್ಧರಿಸಿದ್ದಾರೆ.

ಭಾರತದ ಮುಂದಿನ ಟೆಸ್ಟ್ ಸರಣಿ ಜೂನ್‌ನಲ್ಲಿ ನಡೆಯಲಿದ್ದು, ಭಾರತದ ಮುಂದಿನ ಪ್ರಮುಖ ಏಕದಿನ ಪಂದ್ಯಾವಳಿ 2027 ರ ಏಕದಿನ ವಿಶ್ವಕಪ್ ಆಗಿದೆ. ಈಗ, ಚಾಂಪಿಯನ್ಸ್ ಟ್ರೋಫಿ 2025 ಮತ್ತು ಮುಂದಿನ ವಿಶ್ವಕಪ್ ನಡುವೆ ಇಷ್ಟು ಸಮಯ ಇರುವುದರಿಂದ ಟೀಂ ಇಂಡಿಯಾದಲ್ಲಿ ಬದಲಾವಣೆಯಾಗುವ ಸುದ್ದಿ ಚರ್ಚೆಯಲ್ಲಿದೆ.

ನಾಳೆ ದುಬೈನಲ್ಲಿ ಐಸಿಸಿ ಚಾಂಪಿಯನ್ ಟ್ರೋಫಿ ಫೈನಲ್ ನಡೆಯಲಿದ್ದು, ಇದರಲ್ಲಿ ರೋಹಿತ್ ಶರ್ಮಾ ಅವರ ಮುಂದಿನ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.  ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಸೋತರೆ ರೋಹಿತ್ ನಿವೃತ್ತಿ ಹೊಂದಬಹುದು ಎಂದು ಬಿಸಿಸಿಐ ಮೂಲವೊಂದು ಹೇಳಿದೆ.

ಭಾರತ ಗೆದ್ದರೆ, ರೋಹಿತ್ ಅವರ ನಿರ್ಧಾರದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ವರದಿ ಹೇಳಿಕೊಂಡಿದೆ. 2024ರಲ್ಲಿ ಟಿ 10 ವಿಶ್ವಕಪ್‌ ಅನ್ನು ಗೆಲ್ಲುವ ಮೂಲಕ ನಾಯಕನಾಗಿ ಅವರು ಗೆದ್ದುಕೊಂಡರು.

ಭಾರತ 2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಅನ್ನು ಗೆದ್ದರೆ, ರೋಹಿತ್ ಏಕದಿನ ಪಂದ್ಯಗಳಲ್ಲಿ ಮಾತ್ರ ಆಟಗಾರನಾಗಿ ಮುಂದುವರಿಯುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ. ಮುಂದಿನ ದಿನಗಳಲ್ಲಿ ಟೀಂ ಇಂಡಿಯಾ ನಾಯಕತ್ವ ಹಾರ್ದಿಕ್ ಪಾಂಡ್ಯ ಅಥವಾ ಶುಭಮನ್ ಗಿಲ್ ಅವರಿಗೆ ಹಸ್ತಾಂತರಿಸಲ್ಪಡುತ್ತದೆ ಎಂದು ವರದಿ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments