Select Your Language

Notifications

webdunia
webdunia
webdunia
webdunia

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025

Sampriya

ನವದೆಹಲಿ , ಶನಿವಾರ, 14 ಜೂನ್ 2025 (17:14 IST)
photo Courtesy X
ನವದೆಹಲಿ: ಐಸಿಸಿ ಟೂರ್ನಿಗಳಲ್ಲಿ ದಕ್ಷಿಣ ಆಫ್ರಿಕಾ ತಂಡವು ಚೋಕರ್ಸ್‌ ಹಣೆಪಟ್ಟಿ ಕಳಚಿ ಐಸಿಸಿ ಟೆಸ್ಟ್‌ ಚಾಂಪಿಯನ್‌ಷಿಪ್‌ನಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಫೈನಲ್‌ನಲ್ಲಿ ನಾಲ್ಕನೇ ದಿನವಾದ ಶನಿವಾರ ಫಲಿತಾಂಶ ಪ್ರಕಟವಾಗಲಿದೆ. ಹಾಕಿ ಚಾಂಪಿಯನ್‌ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಆಫ್ರಿಕಾ ಮೊದಲನೇ ಭಾರೀ ಐಸಿಸಿ ಏಕದಿನ ವಿಶ್ವಕಪ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣಾ ಆಫ್ರಿಕಾ ಗೆದ್ದುಬೀಗಿ, ಐತಿಹಾಸಿಕ ಸಾಧನೆಯನ್ನು ಮಾಡಿತು. 

ಎರಡನೇ ಇನ್ನಿಂಗ್ಸ್‌ನಲ್ಲಿ 282 ರನ್‌ಗಳ ಗುರಿಯನ್ನು ಪಡೆದ ಆಫ್ರಿಕಾ ಮೂರನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು. . ಶನಿವಾರ ಇನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು ನಾಯಕ ತೆಂಬಾ ಬವುಮಾ (66;134 ಎಸೆತ) ಅವರ ವಿಕೆಟ್‌ ಪತನಗೊಂಡಿದೆ.

ದಕ್ಷಿಣ ಆಫ್ರಿಕಾ ತಂಡ ಇಲ್ಲಿಯವರೆಗೆ ವಿಶ್ವಕಪ್‌, ಟಿ 20 ಲೀಗ್‌ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿ ಆಫ್ರಿಕಾ ಸೆಮಿಫೈನಲ್‌ ಪ್ರವೇಶಿಸುತ್ತಿತ್ತು. ಆದರೆ ಸೆಮಿಫೈನಲ್‌ನಲ್ಲಿ ಪ್ರತಿ ಬಾರಿಯೂ ಸೋಲು ಕಾಣುತ್ತಿತ್ತು.

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ 5 ಬಾರಿ ಸೆಮಿಫೈನಲ್‌ನಲ್ಲೇ ಸೋತಿತ್ತು. 1992, 1999, 2007, 2015, 2023 ರಲ್ಲಿ ಸೋಲು ಕಂಡಿತ್ತು. 2024ರ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಫೈನಲ್‌ನಲ್ಲಿ ಸೋಲು ಅನುಭವಿಸಿತು.  

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌