IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

Sampriya
ಬುಧವಾರ, 3 ಡಿಸೆಂಬರ್ 2025 (22:20 IST)
Photo Credit X
ರಾಯ್‌ಪುರ: ಏಡನ್‌ ಮರ್ಕರಂ ಅವರ ಅಮೋಘ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು ಬುಧವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ ಬೃಹತ್‌ ಮೊತ್ತದ ಸವಾಲನ್ನು ಚೇಸಿಂಗ್‌ ಮಾಡಿ ಜಯ ಸಾಧಿಸಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯು 1–1 ಸಮಬಲಗೊಂಡಿದೆ.

ಭಾರತ ತಂಡವು ಸತತ 20ನೇ ಪಂದ್ಯದಲ್ಲೂ ಟಾಸ್‌ ಸೋತಿತ್ತು. ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಫೀಲ್ಡಿಂಗ್‌ ಆಯ್ದುಕೊಂಡರು. ಬ್ಯಾಟಿಂಗ್‌ಗೆ ಇಳಿದ ಭಾರತ ತಂಡವು ಋತುರಾಜ್ ಗಾಯಕವಾಡ್‌ (105 ರನ್‌) ಮತ್ತು ವಿರಾಟ್‌ ಕೊಹ್ಲಿ (102 ರನ್‌) ಅವರ ಶತಕಗಳ ನೆರವಿನಿಂದ 50 ಓವರ್‌ಗಳಲ್ಲಿ 5 ವಿಕೆಟ್‌ಗೆ 358 ರನ್‌ ಗಳಿಸಿತ್ತು. ವಿರಾಟ್‌ ಕೊಹ್ಲಿ ಅವರು ಏಕದಿನ ಕ್ರಿಕೆಟ್‌ನಲ್ಲಿ ದಾಖಲೆಯ 53ನೇ ಶತಕ ದಾಖಲಿಸಿದ್ದರು.

ಈ ಕಠಿಣ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು ನಾಲ್ಕು ಎಸೆತಗಳು ಬಾಕಿ ಇರುವಂತೆ ಆರು ವಿಕೆಟ್‌ಗೆ 262 ರನ್‌ ಗಳಿಸಿ ಜಯ ಸಾಧಿಸಿತು. ಆರಂಭಿಕ ಆಟಗಾರ ಏಡನ್‌ ಮಾರ್ಕರಂ 98 ಎಸೆತಗಳಲ್ಲಿ 110 ರನ್‌ ಗಳಿಸಿ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ನಂತರದಲ್ಲಿ ತೆಂಬಾ ಬವುಮಾ 46 ರನ್‌, ಮ್ಯಾಥ್ಯೂ ಬ್ರಿಟ್ಜ್‌ಕೆ 68 ಮತ್ತು ಡೆವಾಲ್ಡ್‌ ಬ್ರೆವಿಸ್‌ 54 ರನ್‌ ಗಳಿಸಿ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾದರು.

ಭಾರತದ ಬೌಲರ್‌ಗಳನ್ನು ಎದುರಾಳಿ ಬ್ಯಾಟರ್‌ಗಳು ಮನಬಂದಂತೆ ದಂಡಿಸಿದರು. ಅರ್ಷದೀಪ್‌ ಮತ್ತು ಪ್ರಸಿದ್ಧ ಕೃಷ್ಣ ದುಬಾರಿಯಾದರೂ ತಲಾ ಎರಡು ವಿಕೆಟ್‌ ಪಡೆದರು. ಹರ್ಷಿತ್‌ ರಾಣಾ, ಕುಲದೀಪ್‌ ಯಾದವ್‌ ತಲಾ ಒಂದು ವಿಕೆಟ್‌ ಪಡೆದರು

ಸರಣಿ ಸಮಬಲಗೊಂಡಿರುವುದರಿಂದ ಶನಿವಾರ ನಡೆಯುವ ಮೂರನೇ ಪಂದ್ಯವೂ ನಿರ್ಣಾಯಕವಾಗಲಿದೆ. ಆ ಪಂದ್ಯವನ್ನು ಗೆದ್ದ ತಂಡವು ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಇದಕ್ಕೂ ಮೊದಲು ನಡೆದಿದ್ದ ಟೆಸ್ಟ್‌ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಕ್ಲೀನ್‌ಸ್ವೀಪ್‌ ಮಾಡಿಕೊಂಡಿತ್ತು. ಇದೇ 9ರಂದು ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND- SA 2nd ODI: ಭಾರತ ವಿರುದ್ಧ ದಾಖಲೆಯ ರನ್‌ ಚೇಸಿಂಗ್‌ ಮಾಡಿ ಗೆದ್ದ ದಕ್ಷಿಣ ಆಫ್ರಿಕಾ

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ಮುಂದಿನ ಸುದ್ದಿ
Show comments