Publish Date: Sat, 20 Jun 2026 (13:09 IST)
Updated Date: Sat, 20 Jun 2026 (13:14 IST)
ಚೆನ್ನೈ: ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಕಳೆದ ಎರಡೂ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಈಗಾಗಲೇ ಸರಣಿ ತನ್ನ ವಶ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಗುರಿ ಹೊಂದಿದೆ. ಅತ್ತ ಅಫ್ಘಾನಿಸ್ತಾನ ಟೆಸ್ಟ್ ಮತ್ತು ಕಳೆದ ಎರಡೂ ಏಕದಿನ ಪಂದ್ಯದಲ್ಲಿ ಸೋತಿರುವ ಕಾರಣ ಕೊನೆಯ ಪಂದ್ಯವನ್ನಾದರೂ ಗೆಲ್ಲುವ ತವಕದಲ್ಲಿದೆ.
ಇಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಇತ್ತ ಟೀಂ ಇಂಡಿಯಾ ಕೂಡಾ ಇಂದು ಮೂರು ಬದಲಾವಣೆ ಮಾಡಿಕೊಂಡಿದೆ. ಪ್ರಸಿದ್ಧ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ ಮತ್ತು ಹರ್ಷ್ ದುಬೆ ತಂಡಕ್ಕೆ ವಾಪಸ್ ಆಗಿದ್ದಾರೆ. ಕಳೆದ ಪಂದ್ಯದಲ್ಲಿ ಆಡಿದ್ದ ಪ್ರಿನ್ಸ್ ಯಾದವ್, ಅರ್ಷ್ ದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್ ಗೆ ಇಂದು ವಿಶ್ರಾಂತಿ ನೀಡಲಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ