Select Your Language

Notifications

webdunia
webdunia
webdunia
webdunia

IND vs AFG T20I: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿದೆ?

Rohit Sharma

Krishnaveni K

ಮೊಹಾಲಿ , ಗುರುವಾರ, 11 ಜನವರಿ 2024 (18:40 IST)
Photo Courtesy: Twitter
ಮೊಹಾಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ರೋಹಿತ್ ಶರ್ಮಾ ಒಂದೂವರೆ ವರ್ಷದ ಬಳಿಕ ಟೀಂ ಇಂಡಿಯಾವನ್ನು ಟಿ20 ಪಂದ್ಯಗಳಲ್ಲಿ ತಂಡ ಮುನ್ನಡೆಸುತ್ತಿರುವುದು ವಿಶೇಷವಾಗಿದೆ. ಕೊಹ್ಲಿ ಈ ಸರಣಿಗೆ ಆಯ್ಕೆಯಾಗಿದ್ದರೂ ಈ ಪಂದ್ಯದಿಂದ ಕೌಟುಂಬಿಕ ಕಾರಣ ನೀಡಿ ಹೊರಗುಳಿದಿದ್ದಾರೆ.

ಮುಂಬರುವ ವಿಶ್ವಕಪ್ ನ್ನು ದೃಷ್ಟಿಯಲ್ಲಿಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲಾಗಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಈ ಪಂದ್ಯದಲ್ಲಿ ಶಿವಂ ದುಬೆ, ಯಶಸ್ವಿ ಜೈಸ್ವಾಲ್, ಆವೇಶ್ ಖಾನ್ ಗೆ ಅವಕಾಶ ನೀಡಲಾಗಿಲ್ಲ. ಕುಲದೀಪ್ ಯಾದವ್ ಕೂಡಾ ಹೊರಗುಳಿದಿದ್ದಾರೆ. ಉಳಿದಂತೆ ತಂಡ ಇಂತಿದೆ.

ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ತಿಲಕ್ ವರ್ಮ, ಶಿವಂ ದುಬೆ, ಜಿತೇಶ್ ಶರ್ಮ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮುಕೇಶ್ ಕುಮಾರ್, ಅರ್ಷ್ ದೀಪ್ ಸಿಂಗ್.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲೂ ಇಂಥಾ ಚಳಿ ನೋಡಿಲ್ಲ ಎಂದ ದ್ರಾವಿಡ್!