Publish Date: Thu, 11 Jan 2024 (08:20 IST)
Updated Date: Thu, 11 Jan 2024 (08:49 IST)
ಮೊಹಾಲಿ: ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಮುಗಿಸಿದ ಟೀಂ ಇಂಡಿಯಾ ಇಂದಿನಿಂದ ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿ ಆಡಲು ಸಿದ್ಧವಾಗಿದೆ.
ಮೊಹಾಲಿಯಲ್ಲಿ ಇಂದು ಮೊದಲ ಪಂದ್ಯ ನಡೆಯಲಿದೆ. ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಹಿರಿಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ20 ಫಾರ್ಮ್ಯಾಟ್ ನಲ್ಲಿ ಕಣಕ್ಕಿಳಿಯುತ್ತಿದೆ. ವಿರಾಟ್ ಕೊಹ್ಲಿ ಕೂಡಾ ಈ ಸರಣಿಗೆ ಆಯ್ಕೆಯಾಗಿದ್ದರೂ ವೈಯಕ್ತಿಕ ಕಾರಣದಿಂದ ಇಂದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ರೋಹಿತ್-ಕೊಹ್ಲಿ ತಂಡಕ್ಕೆ ವಾಪಸ್ ಆಗಿರುವುದರಿಂದ ಪ್ಲೇಯಿಂಗ್ ಇಲೆವೆನ್ ಬಗ್ಗೆ ಕುತೂಹಲವಿದೆ. ಆರಂಭಿಕರಾಗಿ ರೋಹಿತ್ ಜೊತೆಗೆ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸುತ್ತಿರುವುದಾಗಿ ಈಗಾಗಲೇ ಕೋಚ್ ದ್ರಾವಿಡ್ ಸುಳಿವು ನೀಡಿದ್ದಾರೆ. ಹೀಗಾಗಿ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡಬಹುದು.
ಬೌಲಿಂಗ್ ನಲ್ಲಿ ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಮುಕೇಶ್ ಕುಮಾರ್ ಗೆ ಅವಕಾಶ ಸಿಗಬಹುದು. ಈ ತಂಡ ಯುವ ಮತ್ತು ಅನುಭವಿ ಆಟಗಾರರಿಂದ ಕೂಡಿದ್ದು, ಎಲ್ಲರ ಚಿತ್ತ ಬಹಳ ಸಮಯದ ನಂತರ ಹಿಟ್ ಮ್ಯಾನ್ ರೋಹಿತ್ ಟಿ20 ಇನಿಂಗ್ಸ್ ಹೇಗೆ ಆಡುತ್ತಾರೆ ಎಂಬುದರ ಮೇಲಿರಲಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಜಿಯೋ ಸಿನಿಮಾ ಆಪ್ ನಲ್ಲಿ ಉಚಿತವಾಗಿ ವೀಕ್ಷಿಸಬಹುದು.