Select Your Language

Notifications

webdunia
webdunia
webdunia
webdunia

IND vs AFG: ಟೀಂ ಇಂಡಿಯಾಗೆ ಅಫ್ಘಾನಿಸ್ತಾನದ ವಿರುದ್ಧ ಕ್ಲೀನ್ ಸ್ವೀಪ್ ಗುರಿ

Ishan Kishan
ಚೆನ್ನೈ: ಅಫ್ಘಾನಿಸ್ತಾನ ವಿರುದ್ಧ ಇಂದು ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಮೂರನೇ ಏಕದಿನ ಪಂದ್ಯವಾಡಲಿರುವ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಗುರಿ ಹಾಕಿಕೊಂಡಿದೆ.

ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಟೀಂ ಇಂಡಿಯಾ ಎರಡೂ ಪಂದ್ಯವನ್ನೂ ಗೆದ್ದು 2-0 ಅಂತರದಿಂದ ಮುನ್ನಡೆಯಲ್ಲಿದೆ. ಈಗಾಗಲೇ ಸರಣಿ ಗೆದ್ದಿರುವ ಟೀಂ ಇಂಡಿಯಾ ಇಂದೂ ಗೆದ್ದರೆ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಳ್ಳಲಿದೆ.

ಕಳೆದ ಎರಡೂ ಪಂದ್ಯಗಳಲ್ಲಿ ಭಾರತದ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಸಿಕ್ಕ ಅವಕಾಶವನ್ನು ಬಳಸಿಕೊಂಡಿಲ್ಲ. ಇತ್ತ ರೋಹಿತ್ ಶರ್ಮಾ ಉತ್ತಮ ಆರಂಭ ಪಡೆದರೂ ಅದನ್ನು ದೊಡ್ಡ ಮೊತ್ತವಾಗಿಸಿಲ್ಲ. ಸದ್ಯಕ್ಕೆ ಹಿರಿಯ ರೋಹಿತ್ ಗೆ ಯುವ ಆಟಗಾರರೊಂದಿಗೆ ಪೈಪೋಟಿ ಎದುರಿಸಬೇಕಾಗಿದೆ. ರನ್ ಗಳಿಸಬೇಕಾದ ಒತ್ತಡವಿದೆ.

ಬೌಲಿಂಗ್ ನಲ್ಲಿ ಟೀಂ ಇಂಡಿಯಾ ಎರಡೂ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಇಂದಿನ ಪಂದ್ಯಕ್ಕೆ ಹರ್ಷಿತ್ ರಾಣಾ ತಂಡಕ್ಕೆ ಸೇರ್ಪಡೆಯಾಗಿದ್ದು ಆಡುವ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಹಾಗಿದ್ದಲ್ಲಿ ಪ್ರಿನ್ಸ್ ಯಾದವ್ ಅಥವಾ ಗುರ್ನೂರು ಬ್ರಾರ್ ಸ್ಥಾನ ಕಳೆದುಕೊಳ್ಳಬಹುದು. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಸಾಧ್ಯತೆಯಿಲ್ಲ. ಈ ಪಂದ್ಯ ಅಪರಾಹ್ನ 1.30 ಕ್ಕೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಅಥವಾ ಜಿಯೋ ಹಾಟ್ ಸ್ಟಾರ್ ನಲ್ಲಿ ನೇರಪ್ರಸಾರವಾಗಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶ್ರೇಯಾಂಕ ಪಾಟೀಲ್ ಅಂದುಕೊಂಡಿದ್ದು ಆಗಲೇ ಇಲ್ಲ: ವಿಶ್ವಕಪ್ ನಿಂದಲೇ ಔಟ್