ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ವೇಗಿ ಜಸ್ಪ್ರೀತ್ ಬುಮ್ರಾ ದಾಖಲೆಯೊಮದನ್ನು ಮಾಡಿದ್ದಾರೆ.
ಈ ಪಂದ್ಯದಲ್ಲಿ ಮತ್ತೊಮ್ಮೆ ಬುಮ್ರಾ 5 ವಿಕೆಟ್ ಕಬಳಿಸಿ ಮಿಂಚಿದರು. ಈ ಮೂಲಕ ವಿದೇಶೀ ನೆಲದಲ್ಲಿ ಅತ್ಯಧಿಕ ವಿಕೆಟ್ ಗಳಿಸಿದ ಭಾರತೀಯ ವೇಗಿ ಎಂಬ ದಾಖಲೆ ಮಾಡಿದ್ದಾರೆ. ಟೀಂ ಇಂಡಿಯಾ ಪರ ಅತ್ಯಧಿಕ 5 ವಿಕೆಟ್ ಕಬಳಿಸಿದ್ದ ಕಪಿಲ್ ದೇವ್ ದಾಖಲೆಯನ್ನು ಮುರಿದರು. ಉಸ್ಮಾನ್ ಖವಾಜ, ಮೆಕ್ ಸ್ವೀನಿ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಅವರ ಪ್ರಮುಖ ವಿಕೆಟ್ ಗಳನ್ನು ಬುಮ್ರಾ ಕಬಳಿಸಿದರು.
ಇಂದು ಟ್ರಾವಿಸ್ ಹೆಡ್ ಮತ್ತು ಸ್ಟೀವ್ ಸ್ಮಿತ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ದಿನದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 405 ರನ್ ಗಳಿಸಿತು. ಈ ಪೈಕಿ ಟ್ರಾವಿಸ್ ಹೆಡ್ 152 ರನ್ ಗಳಿಸಿದರೆ ಸ್ಮಿತ್ 101 ರನ್ ಗಳಿಸಿದರು. ದಿನದಂತ್ಯಕ್ಕೆ ಅಲೆಕ್ಸ್ ಕ್ಯಾರಿ 45, ಮಿಚೆಲ್ ಸ್ಟಾರ್ಕ್ 7 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಭಾರತದ ಪರ ಬುಮ್ರಾ 5 ವಿಕೆಟ್ ಕಬಳಿಸಿದರೆ, ನಿತೀಶ್ ಕುಮಾರ್, ಮೊಹಮ್ಮದ್ ಸಿರಾಜ್ ತಲಾ 1 ವಿಕೆಟ್ ಕಬಳಿಸಿದರು.