ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ.
ಕಳೆದ ಪಂದ್ಯ ಸೋತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಇಂದು ಸೋತರೆ ಸರಣಿ ಕಳೆದುಕೊಳ್ಳಬೇಕಾಗುತ್ತದೆ. ಇದೀಗ ಒತ್ತಡದ ಪಂದ್ಯದಲ್ಲಿ ಟಾಸ್ ಕೂಡಾ ಸೋತಿದೆ.
ಕಳೆದ ಪಂದ್ಯದಲ್ಲಿ ಅನುಭವಿ ಬ್ಯಾಟರ್ ಗಳು ಸಂಪೂರ್ಣ ವಿಫಲರಾಗಿದ್ದರು. ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ ಬಿಟ್ಟರೆ ಉಳಿದವರಿಂದ ಉತ್ತಮ ಪ್ರದರ್ಶನ ಬಂದಿರಲಿಲ್ಲ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮೇಲೆ ಅಪಾರ ನಿರೀಕ್ಷೆಯಿತ್ತು. ಆದರೆ ಇಬ್ಬರೂ ನಿರಾಸೆ ಉಂಟುಮಾಡಿದ್ದರು. ಇಂದಿನ ಆಡುವ ಬಳಗದಲ್ಲಿ ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡಿಲ್ಲ.
ಶುಭ ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಷ್ ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.