IND vs AUS T20: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ತಂಡದಲ್ಲಿ ಮೂರು ಬದಲಾವಣೆ

Sampriya
ಭಾನುವಾರ, 2 ನವೆಂಬರ್ 2025 (13:55 IST)
Photo Credit X
ಹೋಬರ್ಟ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ. 

ಹೋಬರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಮೊದಲ ಪಂದ್ಯ ಮಳೆಗೆ ಆಹುತಿಯಾಗಿದೆ. ಎರಡನೇ ಪಂದ್ಯವನ್ನು ಆಸ್ಟ್ರೇಲಿಯಾ ತಂಡ ನಾಲ್ಕು ವಿಕೆಟ್‌ಗಳಿಂದ ಗೆದ್ದಿದೆ. ಸರಣಿಯನ್ನು ಗೆಲ್ಲಬೇಕಾದರೆ ಭಾರತ ತಂಡಕ್ಕೆ ಇಂದಿನ ಪಂದ್ಯ ನಿರ್ಣಾಯಕವಾಗಿದೆ. ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಸರಣಿಯಲ್ಲಿ ಸಮಬಲ ಸಾಧಿಸಬಹುದು. ಅಲ್ಲದೆ 4ನೇ ಮತ್ತು 5ನೇ ಪಂದ್ಯಗಳಲ್ಲಿ ಗೆದ್ದು ಸರಣಿ ಜಯಿಸುವ ಅವಕಾಶವನ್ನು ಹೊಂದಿದೆ. ಹೀಗಾಗಿ ಸರಣಿ ಗೆಲ್ಲಬೇಕಿದ್ದರೆ ಇಂದಿನ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಲೇಬೇಕು.

ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 3 ಬದಲಾವಣೆ ಮಾಡಿಕೊಂಡಿದೆ. ಅದರಂತೆ ಕಳೆದ ಎರಡು ಪಂದ್ಯಗಳಲ್ಲಿ ಹೊರಗುಳಿದಿದ್ದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಕಳೆದ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ್ದ ಸಂಜು ಸ್ಯಾಮ್ಸನ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ಪಂದ್ಯದಿಂದ ಹೊರಗುಳಿದಿದ್ದಾರೆ. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಮುಂದಿನ ಸುದ್ದಿ
Show comments