ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಮತ್ತೆ ಟೀಂ ಇಂಡಿಯಾ ಟಾಸ್ ಸೋತಿದೆ. ಆದರೂ ಗಂಭೀರ್ ದತ್ತು ಪುತ್ರ ಹರ್ಷಿತ್ ರಾಣಾಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಕಳೆದ ಎರಡೂ ಪಂದ್ಯಗಳಲ್ಲಿ ಸೋತಿರುವ ಟೀಂ ಇಂಡಿಯಾಗೆ ಇಂದಿನ ಪಂದ್ಯ ಗೆದ್ದು ವೈಟ್ ವಾಶ್ ತಪ್ಪಿಸುವ ಅನಿವಾರ್ಯತೆಯಿದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಟಾಸ್ ಸೋತಿದ್ದು ಮೊದಲು ಫೀಲ್ಡಿಂಗ್ ಮಾಡಲಿದೆ.
ಈ ಪಂದ್ಯಕ್ಕೆ ಟೀಂ ಇಂಡಿಯಾ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ನಿತೀಶ್ ಕುಮಾರ್ ರೆಡ್ಡಿ ಮತ್ತು ಅರ್ಷ್ ದೀಪ್ ಸಿಂಗ್ ಬದಲಿಗೆ ಪ್ರಸಿದ್ಧ ಕೃಷ್ಣ ಮತ್ತು ಕುಲದೀಪ್ ಯಾದವ್ ಗೆ ಸ್ಥಾನ ನೀಡಲಾಗಿದೆ. ಗಂಭೀರ್ ದತ್ತು ಪುತ್ರ ಎಂದೇ ಕರೆಯಲ್ಪಡುವ ಹರ್ಷಿತ್ ರಾಣಾರನ್ನು ಈ ಪಂದ್ಯದಿಂದ ಹೊರಗಿಡಬಹುದು ಎಂದು ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಅವರು ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
ಭಾರತ ತಂಡ ಇಂತಿದೆ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ ಕೃಷ್ಣ.