ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ಟಿ20 ಸರಣಿ ಆರಂಭವಾಗಲಿದ್ದು, ಸಂಪೂರ್ಣ ವೇಳಾಪಟ್ಟಿ ಮತ್ತು ಎಲ್ಲಿ ಲೈವ್ ವೀಕ್ಷಿಸಬೇಕು ಇಲ್ಲಿದೆ ವಿವರ.
ಆಸ್ಟ್ರೇಲಿಯಾ ವಿರುದ್ಧ ಭಾರತ ಒಟ್ಟು 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಪೈಕಿ ಮೊದಲ ಪಂದ್ಯ ನಾಳೆ ಓವಲ್ ಮೈದಾನದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಅಕ್ಟೋಬರ್ 31 ರಂದು ಎಂಸಿಜಿ ಮೈದಾನದಲ್ಲಿ ನಡೆಯಲಿದೆ. ಮೂರನೇ ಪಂದ್ಯ ನವಂಬರ್ 2 ರಂದು ಹೋಬರ್ಟ್ ನಲ್ಲಿ ನಡೆಯಲಿದೆ. ನಾಲ್ಕನೇ ಪಂದ್ಯ ನವಂಬರ್ 6 ರಂದು ಹೆರಿಟೇಜ್ ಬ್ಯಾಂಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಐದನೇ ಪಂದ್ಯ ಗಬ್ಬಾ ಮೈದಾನದಲ್ಲಿ ನವಂಬರ್ 8 ರಂದು ನಡೆಯುವುದು.
ಒಟ್ಟು ಐದು ಪಂದ್ಯಗಳ ಸರಣಿ ಇದಾಗಿದ್ದು ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಘಟಾನುಘಟಿಗಳೇ ಇದ್ದಾರೆ.
ಸರಣಿಯ ಎಲ್ಲಾ ಪಂದ್ಯಗಳೂ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.45 ಕ್ಕೆ ಆರಂಭವಾಗಲಿದೆ. ಎಲ್ಲಾ ಪಂದ್ಯಗಳ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಅಥವಾ ಜಿಯೋ ಹಾಟ್ ಸ್ಟಾರ್ ಆಪ್ ನಲ್ಲಿ ವೀಕ್ಷಿಸಬಹುದಾಗಿದೆ.