ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಮಳೆಯ ಕಾರಣಕ್ಕೆ ಅರ್ಧಕ್ಕೆ ಸ್ಥಗಿತಗೊಂಡಿದೆ. ಇಂದು ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 5 ಗಂಟೆಗೆ ಪಂದ್ಯ ಆರಂಭಗೊಂಡಿದೆ. ಆದರೆ ಮಳೆಯಿಂದಾಗಿ ಕೇವಲ13 ಓವರ್ ಗಳಷ್ಟೇ ಪಂದ್ಯ ನಡೆದಿದೆ. ಈ ವೇಳೆ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ 28 ರನ್ ಗಳಿಸಿತ್ತು. ಭಾರತದಂತೆ ಅವಸರ ಮಾಡದೇ ಆರಂಭದಲ್ಲಿ ಆಸೀಸ್ ಎಚ್ಚರಿಕೆಯ ಆಟಕ್ಕೆ ಕೈ ಹಾಕಿದೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ವೇಗಿ ಹರ್ಷಿತ್ ರಾಣಾ ಬದಲು ಆಕಾಶ್ ದೀಪ್ ಗೆ ಅವಕಾಶ ನೀಡಿದೆ. ಇನ್ನು ಹಿರಿಯ ಸ್ಪಿನ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಸ್ಥಾನಕ್ಕೆ ಮತ್ತೊಬ್ಬ ಸ್ಪಿನ್ ಆಲ್ ರೌಂಡರ್ ರವೀಂದ್ರರ ಜಡೇಜಾಗೆ ಸ್ಥಾನ ನೀಡಿದೆ.
ಈ ಪಂದ್ಯದಲ್ಲಿ ಭಾರತ ತಂಡ ಇಂತಿದೆ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಆಕಾಶ್ ದೀಪ್.