IND vs AUS Test: ಪರ್ತ್ ನಲ್ಲಿ ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವು
ಬೆಂಗಳೂರು , ಸೋಮವಾರ, 25 ನವೆಂಬರ್ 2024 (13:41 IST)
ಪರ್ತ್: ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು 295 ರನ ಗಳಿಂದ ಗೆದ್ದ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಸರಣಿಯಲ್ಲಿ 1-0 ರಿಂದ ಮುನ್ನಡೆ ಸಾಧಿಸಿದೆ.
ಪರ್ತ್ ಮೈದಾನದಲ್ಲಿ 16 ವರ್ಷಗಳ ಬಳಿಕ ಗೆಲುವು ಸಾಧಿಸಿದ ದಾಖಲೆ ಮಾಡಿದೆ. ಮೊದಲ ಇನಿಂಗ್ಸ್ ನಲ್ಲಿ ಭಾರತ 150 ಕ್ಕೆ ಆಲೌಟ್ ಆದಾಗ ಈ ಗೆಲುವನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆದರೆ ಜಸ್ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ಆಸೀಸ್ ಕೇವಲ 104 ಕ್ಕೆ ಆಲೌಟ್ ಆಯಿತು.
46 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತಕ್ಕೆ ಯಶಸ್ವಿ ಜೈಸ್ವಾಲ್-ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಬೃಹತ್ ಮೊತ್ತ ಪೇರಿಸಲು ನೆರವಾದರು. ಭಾರತ ದ್ವಿತೀಯ ಇನಿಂಗ್ಸ್ ನಲ್ಲಿ 487 ರನ್ ಗಳಿಸಿ ಎದುರಾಳಿಗೆ 534 ರನ್ ಗಳ ಗುರಿ ನೀಡಿತು.
ಇದನ್ನು ಬೆನ್ನತ್ತಿದ ಆಸೀಸ್ ಇಂದು ನಾಲ್ಕನೇ ದಿನ 238 ರನ್ ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ದ್ವಿತೀಯ ಇನಿಂಗ್ಸ್ ನಲ್ಲೂ ಜಾದೂ ಮಾಡಿದ ಬುಮ್ರಾ 3 ವಿಕೆಟ್ ಕಬಳಿಸಿದರು. ಅವರಿಗೆ ಸಾಥ್ ನೀಡಿದ ಮೊಹಮ್ಮದ್ ಸಿರಾಜ್ 3, ವಾಷಿಂಗ್ಟನ್ ಸುಂದರ್ 2, ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ 1 ವಿಕೆಟ್ ಕಬಳಿಸಿದರು.
ಮುಂದಿನ ಸುದ್ದಿ