ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾಗೆ ಇಂದಿನಿಂದ ಪಿಂಕ್ ಟೆಸ್ಟ್ ಆರಂಭವಾಗಲಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಬಗ್ಗೆ ಎಲ್ಲರಿಗೂ ಕುತೂಹಲವಿದೆ. ಅದಕ್ಕೆ ತಕ್ಕಂತೆ ತಂಡದಲ್ಲಿ ಈ ಪಂದ್ಯಕ್ಕೆ ಮೂರು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ಆಡಿದ್ದ ದೇವದತ್ತ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಧ್ರುವ ಜ್ಯುರೆಲ್ ಸ್ಥಾನ ಕಳೆದುಕೊಂಡಿದ್ದಾರೆ.
ಅವರ ಬದಲಿಗೆ ನಾಯಕ ರೋಹಿತ್ ಶರ್ಮಾ, ಶುಬ್ಮನ್ ಗಿಲ್ ಮತ್ತು ಹಿರಿಯ ಸ್ಪಿನ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದಿದ್ದಾರೆ. ಇನ್ನು, ಆಸ್ಟ್ರೇಲಿಯಾ ಒಂದು ಬದಲಾವಣೆಯೊಂದಿಗೆ ಈ ಪಂದ್ಯವನ್ನು ಆಡುತ್ತಿದೆ. ಗಾಯಗೊಂಡಿದ್ದ ಜೋಶ್ ಹೇಝಲ್ ವುಡ್ ಬದಲಿಗೆ ಸ್ಕಾಟ್ ಬೊಲ್ಯಾಂಡ್ ಸ್ಥಾನ ಪಡೆದಿದ್ದರು.
ಭಾರತ ತಂಡ ಇಂತಿದೆ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಿತೀಶ್ ರೆಡ್ಡಿ, ರವಿಚಂದ್ರನ್ ಅಶ್ವಿನ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.