IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

Krishnaveni K
ಬುಧವಾರ, 18 ಜೂನ್ 2025 (20:33 IST)
ಲೀಡ್ಸ್: ಭಾರತದ ವಿರುದ್ಧ ಜೂನ್ 20 ರಿಂದ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಬಲಿಷ್ಠ ಆಡುವ ಬಳಗವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಇಲ್ಲಿದೆ ವಿವರ.

ಜೂನ್ 20 ರಿಂದ ಅಂದರೆ ಶುಕ್ರವಾರದಿಂದ ಲೀಡ್ಸ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ ಬಳಿಕ ಟೀಂ ಇಂಡಿಯಾ ಆಡುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಟೀಂ ಇಂಡಿಯಾ ಯುವ ನಾಯಕ ಶುಬ್ಮನ್ ಗಿಲ್ ನೇತೃತ್ವದಲ್ಲಿ ಕಣಕ್ಕಿಳಿಯಲಿದೆ.

ಪಂದ್ಯಕ್ಕೆ ಎರಡು ದಿನ ಮುಂಚಿತವಾಗಿಯೇ ಇಂಗ್ಲೆಂಡ್ ತನ್ನ ಆಡುವ ಬಳಗವನ್ನು ಪ್ರಕಟಿಸಿದೆ. ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡದಲ್ಲಿ ಈ ಹಿಂದೆ ವಿರಾಟ್ ಕೊಹ್ಲಿ ವಿರುದ್ಧ ಸ್ಲೆಡ್ಜಿಂಗ್ ಮಾಡಿ ಸುದ್ದಿಯಾಗಿದ್ದ ಸ್ಯಾಮ್ ಕುಕ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಒಬ್ಬ ಸ್ಪಿನ್ನರ್ ಸೇರಿದಂತೆ ಇಂಗ್ಲೆಂಡ್ ನಾಲ್ವರು ಬೌಲರ್ ಗಳನ್ನು ಕಣಕ್ಕಿಳಿಸುತ್ತಿದೆ. ಲೀಡ್ಸ್ ಮೈದಾನದಲ್ಲಿ ಮೊದಲ ದಿನ ವೇಗಿಗಳಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಈಗಾಗಲೇ ಕ್ಯುರೇಟರ್ ಮಾಹಿತಿ ನೀಡಿದ್ದಾರೆ. ಹಸಿರು ಹೊದಿಕೆಯ ಪಿಚ್ ನಲ್ಲಿ ಇಂಗ್ಲೆಂಡ್ ವೇಗಿಗಳಿಗೆ ಪ್ರಾತಿನಿಧ್ಯ ನೀಡಿದೆ.

ಉಳಿದಂತೆ ಇಂಗ್ಲೆಂಡ್ ಆಡುವ ಬಳಗದ ಪಟ್ಟಿ ಇಂತಿದೆ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಒಲಿ ಪಾಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೆಮಿ ಸ್ಮಿತ್, ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್ ಮತ್ತು ಶೊಯೇಬ್ ಬಶೀರ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments