Select Your Language

Notifications

webdunia
webdunia
webdunia
webdunia

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

IND vs ENG

Krishnaveni K

ಲಾರ್ಡ್ಸ್ , ಗುರುವಾರ, 10 ಜುಲೈ 2025 (15:07 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಏನು ಬದಲಾವಣೆ ಇಲ್ಲಿದೆ ವಿವರ.

ಕಳೆದ ಎರಡೂ ಪಂದ್ಯಗಳಲ್ಲೂ ಇಂಗ್ಲೆಂಡ್ ತಂಡವೇ ಟಾಸ್ ಗೆದ್ದಿತ್ತು. ಕಳೆದ ಎರಡು ಪಂದ್ಯಗಳಲ್ಲಿ ಮೊದಲು ಫೀಲ್ಡಿಂಗ್ ಮಾಡಿದ್ದ ಇಂಗ್ಲೆಂಡ್ ಕೈ ಸುಟ್ಟುಕೊಂಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಪ್ರಕಟಿಸಿದೆ.

ಈ ಪಂದ್ಯಕ್ಕೆ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿಕೊಂಡಿದೆ. ಜಸ್ಪ್ರೀತ್ ಬುಮ್ರಾ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದು ಪ್ರಸಿದ್ಧ ಕೃಷ್ಣ ಸ್ಥಾನ ಕಳೆದುಕೊಂಡಿದ್ದಾರೆ. ಉಳಿದಂತೆ ತಂಡ ಕಳೆದ ಪಂದ್ಯದಲ್ಲಿ ಆಡಿದಂತೆಯೇ ಇದೆ. ಕರುಣ್ ನಾಯರ್, ನಿತೀಶ್ ಕುಮಾರ್ ಸ್ಥಾನ ಉಳಿಸಿಕೊಂಡಿದ್ದಾರೆ.

ಇತ್ತ ಇಂಗ್ಲೆಂಡ್ ತಂಡವೂ ಒಂದು ಬದಲಾವಣೆ ಮಾಡಿಕೊಂಡಿದೆ. ವೇಗಿ ಜೋಫ್ರಾ ಆರ್ಚರ್ ತಂಡಕ್ಕೆ ಬಂದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ