Publish Date: Thu, 07 Mar 2024 (09:15 IST)
Updated Date: Thu, 07 Mar 2024 (09:21 IST)
ಧರ್ಮಶಾಲಾ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯದ ಮೂಲಕ ಕನ್ನಡಿಗ ದೇವದತ್ ಪಡಿಕ್ಕಲ್ ಪದಾರ್ಪಣೆ ಮಾಡಿದ್ದಾರೆ.
ಈ ಪಂದ್ಯಕ್ಕೆ ಟೀಂ ಇಂಡಿಯಾ ಎರಡು ಬದಲಾವಣೆ ಮಾಡಿಕೊಂಡಿದೆ. ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಪುನರಾಗಮನ ಮಾಡಿರುವುದರಿಂದ ಕಳೆದ ಪಂದ್ಯದಲ್ಲಿ ಮೊದಲ ಬಾರಿಗೆ ಆಡಿದ್ದ ಆಕಾಶ್ ದೀಪ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅಲ್ಲದೆ, ಕಳೆದ ಮೂರು ಪಂದ್ಯಗಳಲ್ಲಿ ಅವಕಾಶ ಸಿಕ್ಕಿಯೂ ಬಳಸಿಕೊಳ್ಳದ ರಜತ್ ಪಾಟೀದಾರ್ ನಿರೀಕ್ಷೆಯಂತೇ ಹೊರಗುಳಿದಿದ್ದಾರೆ. ಅವರಿಗೆ ಗಾಯವಾಗಿದೆ ಎಂದು ರೋಹಿತ್ ಶರ್ಮಾ ಅಪ್ ಡೇಟ್ ನೀಡಿದ್ದಾರೆ. ಅವರ ಬದಲಿಗೆ ಕನ್ನಡಿಗ ದೇವದತ್ ಪಡಿಕ್ಕಲ್ ಗೆ ಅವಕಾಶ ಸಿಕ್ಕಿದೆ. ಈ ಮೂಲಕ ಈ ಸರಣಿಯಲ್ಲಿ ಪದಾರ್ಪಣೆ ಮಾಡಿದ ಐದನೇ ಆಟಗಾರರಾಗಿದ್ದಾರೆ. ರವಿಚಂದ್ರನ್ ಅಶ್ವಿನ್ ಗೆ ಇದು 100 ನೇ ಟೆಸ್ಟ್ ಪಂದ್ಯ.
ಇತ್ತ ಇಂಗ್ಲೆಂಡ್ ಕೂಡಾ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಇಂಗ್ಲೆಂಡ್ ತಂಡದ ಪರ ಜಾನಿ ಬೇರ್ ಸ್ಟೋ ಕೂಡಾ ಇಂದು 100 ನೇ ಟೆಸ್ಟ್ ಪಂದ್ಯವಾಡುತ್ತಿದ್ದಾರೆ. ಇಂಗ್ಲೆಂಡ್ ಪರ ಮಾರ್ಕ್ ವುಡ್ ಆಡುತ್ತಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಸರ್ಫರಾಜ್ ಖಾನ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.
ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾವ್ಲೇ, ಡೆನ್ ಬಕೆಟ್, ಒಲಿ ಪಾಪ್, ಜೋ ರೂಟ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೇರ್ ಸ್ಟೋ, ಬೆನ್ ಫೋಕ್ಸ್ (ವಿ.ಕೀ.), ಟಾಮ್ ಹಾರ್ಟ್ಲೀ, ಶೊಯೇಬ್ ಬಾಶಿರ್, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್.