Select Your Language

Notifications

webdunia
webdunia
webdunia
webdunia

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್, ಕೆಎಲ್ ರಾಹುಲ್ ಗೈರು

IND vs ENG
ಕಾರ್ಡಿಫ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಕಳೆದ ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದು ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಇಂದು ಟೀಂ ಇಂಡಿಯಾ ಗೆದ್ದರೆ ಸರಣಿ ತನ್ನದಾಗಿಸಿಕೊಳ್ಳಲಿದೆ. ಒಂದು ವೇಳೆ ಸೋತರೆ ಸರಣಿ ಸಮಬಲಗೊಳ್ಳಲಿದೆ.

ಕಾರ್ಡಿಫ್ ನಲ್ಲಿ ಪಿಚ್ ಮೊದಲು ವೇಗಿಗಳಿಗೆ ಸಹಕಾರ ನೀಡಲಿದ್ದು, ಪಂದ್ಯ ಸಾಗುತ್ತಿದ್ದಂತೇ ಬೌಲರ್ ಗಳಿಗೆ ನೆರವಾಗುವ ಸಾಧ್ಯತೆಯಿದೆ. ಹೀಗಾಗಿ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಟೀಂ ಇಂಡಿಯಾದಲ್ಲಿ ಈ ಪಂದ್ಯದಲ್ಲಿ ಒಂದು ಬದಲಾವಣೆಯಾಗಿದ್ದು ಅನಾರೋಗ್ಯಕ್ಕೊಳಗಾಗಿರುವ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಆಡಲಿದ್ದಾರೆ. ಇನ್ನು ಇಂಗ್ಲೆಂಡ್ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌