Publish Date: Tue, 14 Jul 2026 (17:21 IST)
Updated Date: Tue, 14 Jul 2026 (17:23 IST)
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹೊಸ ದಾಖಲೆ ಮಾಡಿದ್ದಾರೆ.
ಜಸ್ಪ್ರೀತ್ ಬುಮ್ರಾ ಇತ್ತೀಚೆಗೆ ಕೊಂಚ ಮಂಕಾಗಿದ್ದರು. ಐಪಿಎಲ್ ನಲ್ಲೂ ಅವರು ವಿಕೆಟ್ ಕೀಳಲು ವಿಫಲರಾಗಿದ್ದರು. ಆದರೆ ಇಂಗ್ಲೆಂಡ್ ತಲುಪುತ್ತಿದ್ದಂತೇ ಬುಮ್ರಾ ಎಂದಿನ ಖದರ್ ತೋರಿಸಿದ್ದಾರೆ. ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಅವರ ಬೌಲಿಂಗ್ ಗಮನಿಸಿದರೆ ಮತ್ತೆ ಬೂಮ್ ಬೂಮ್ ಬುಮ್ರಾ ಬಂದರು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಇಂದಿನ ಪಂದ್ಯದಲ್ಲಿ ಹ್ಯಾರಿ ಬ್ರೂಕ್ ವಿಕೆಟ್ ಕಬಳಿಸಿದ ಬುಮ್ರಾ ಏಕದಿನ ಪಂದ್ಯದಲ್ಲಿ 150 ನೇ ವಿಕೆಟ್ ತಮ್ಮದಾಗಿಸಿಕೊಂಡರು. ಇನ್ನೊಂದೆಡೆ ಅವರಿಗೆ ಸಾಥ್ ನೀಡಿರುವ ಪ್ರಸಿದ್ಧ ಕೃಷ್ಣ ಮತ್ತು ಗುರ್ನೂರ್ ಬ್ರಾರ್ ತಲಾ 2 ವಿಕೆಟ್ ಕಬಳಿಸಿ ಇಂಗ್ಲೆಂಡ್ ರನ್ ವೇಗಕ್ಕೆ ಕಡಿವಾಣ ಹಾಕಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಇಂಗ್ಲೆಂಡ್ 21 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 102 ರನ್ ಗಳಿಸಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ