ನಾಗ್ಪುರ: ಭಾರತ ಮತ್ತು ಇಂಗ್ಲೆಂಡ್ ನಡುವೆ ಟಿ20 ಸರಣಿ ಮುಕ್ತಾಯವಾಗಿದ್ದು ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಬಗ್ಗೆ ಇಲ್ಲಿದೆ ನೋಟ.
ಟಿ20 ಸರಣಿಯನ್ನು ಭಾರತದ ಯುವ ಪಡೆ ಭರ್ಜರಿಯಾಗಿ ಗೆದ್ದುಕೊಂಡಿತ್ತು. ಇದೀಗ ಹಿರಿಯರ ಸರದಿ. ರೋಹಿತ್ ಶರ್ಮಾ ಸತತ ವೈಫಲ್ಯಗಳ ಬಳಿಕವೂ ನಾಯಕರಾಗಿ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಮುನ್ನ ವೈಯಕ್ತಿಕವಾಗಿ ರೋಹಿತ್ ಗೆ ಮತ್ತು ಟೀಂ ಇಂಡಿಯಾಗೆ ಇದು ಮಹತ್ವದ ಸರಣಿಯಾಗಿದೆ.
ಮೊಹಮ್ಮದ್ ಶಮಿ ಬಹಳ ದಿನಗಳ ನಂತರ ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಕೆಎಲ್ ರಾಹುಲ್ ಕೂಡಾ ತಂಡಕ್ಕೆ ಬಂದಿರುವುದರಿಂದ ಈಗ ರಿಷಭ್ ಪಂತ್ ಗೆ ಅವಕಾಶ ಸಿಗುವುದು ಅನುಮಾನವೆನ್ನಲಾಗುತ್ತಿದೆ. ಬುಮ್ರಾ ಗಾಯಗೊಂಡಿರುವುದರಿಂದ ಮೊಹಮ್ಮದ್ ಶಮಿ ಸ್ಥಾನ ಪಡೆಯಲಿದ್ದಾರೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದ್ದು, ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ.
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ,ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ, ಅರ್ಷ್ ದೀಪ್ ಸಿಂಗ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್.