ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಇಂದು ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಯಾರು ಇನ್, ಯಾರು ಔಟ್ ಇಲ್ಲಿದೆ ವಿವರ.
ಕಳೆದ ಎರಡೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಈಗಾಗಲೇ ಸರಣಿ ಕೈವಶ ಮಾಡಿಕೊಂಡಿದೆ. ಆದರೆ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಇಂದಿನ ಪಂದ್ಯವನ್ನೂ ಗೆಲ್ಲಲು ಪ್ರಯತ್ನಿಸಲಿದೆ.
ಇಂದಿನ ಪಂದ್ಯಕ್ಕೆ ಭಾರತ ಕೆಲವೊಂದು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ರವೀಂದ್ರ ಜಡೇಜಾ, ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿದ್ದರೆ ವರುಣ್ ಚಕ್ರವರ್ತಿ ಗಾಯದ ಕಾರಣಕ್ಕೆ ಹೊರಗಳಿದಿದ್ದಾರೆ. ಅವರ ಬದಲಿಗೆ ವಾಷಿಂಗ್ಟನ್ ಸುಂದರ್, ಅರ್ಷ್ ದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ.ಅತ್ತ ಇಂಗ್ಲೆಂಡ್ ಕೂಡಾ ಜ್ಯಾಮೀ ಓವರ್ಟನ್ ಸ್ಥಾನಕ್ಕೆ ಟಾಮ್ ಬ್ಯಾಂಟನ್ ಅವರನ್ನು ಆಯ್ಕೆ ಮಾಡಿದೆ.
ಟೀಂ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷ್ ದೀಪ್ ಸಿಂಗ್.