IND vs ENG: ರವೀಂದ್ರ ಜಡೇಜಾಗೆ ನಾಲ್ಕು ವಿಕೆಟ್, ಇಂಗ್ಲೆಂಡ್ ಆಲೌಟ್

Krishnaveni K
ಶನಿವಾರ, 24 ಫೆಬ್ರವರಿ 2024 (10:55 IST)
Photo Courtesy: Twitter
ರಾಂಚಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 353 ರನ್ ಗಳಿಗೆ ಆಲೌಟ್ ಆಗಿದೆ. ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಕಬಳಿಸಿದ್ದಾರೆ.

ನಿನ್ನೆ 7 ವಿಕೆಟ್ ನಷ್ಟಕ್ಕೆ 302 ರನ್ ಗಳಿಸಿ ದಿನದಾಟ ಮುಗಿಸಿದ್ದ ಇಂಗ್ಲೆಂಡ್ ಇಂದು 51 ರನ್ ಸೇರಿಸಿ ಸರ್ವಪತನ ಕಂಡಿತು. ನಿನ್ನೆ ಅಜೇಯರಾಗಿದ್ದ ಜೋ ರೂಟ್ ಇಂದು 122 ರನ್ ಗಳಿಸಿ ಔಟಾಗದೇ ಉಳಿದರು. ನಿನ್ನೆ 31 ರನ್ ಗಳಿಸಿದ್ದ ಒಲಿ ರಾಬಿನ್ಸನ್ 58 ರನ್ ಸಿಡಿಸಿದರು. ಇಂದಿನ ಮೂರೂ ವಿಕೆಟ್ ರವೀಂದ್ರ ಜಡೇಜಾ ಪಾಲಾಯಿತು. ನಿನ್ನೆ ಒಂದು ವಿಕೆಟ್ ಕಬಳಿಸಿದ್ದ ಜಡೇಜಾ ಒಟ್ಟು ಮೊದಲ ಇನಿಂಗ್ಸ್ ನಲ್ಲಿ ನಾಲ್ಕು ವಿಕೆಟ್ ತಮ್ಮದಾಗಿಸಿಕೊಂಡರು.

ಭಾರತದ ಪರ ಯಾಕೋ ಈ ಇನಿಂಗ್ಸ್ ನಲ್ಲಿ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಗೆ ಹೆಚ್ಚಿನ ಯಶಸ್ಸು ದೊರೆಯಲಿಲ್ಲ. 22 ಓವರ್ ಬೌಲಿಂಗ್ ಮಾಡಿದ ಅವರಿಗೆ ದಕ್ಕಿದ್ದು ಕೇವಲ 1 ವಿಕೆಟ್. ಉಳಿದಂತೆ ಮೊಹಮ್ಮದ್ ಸಿರಾಜ್ 2, ಚೊಚ್ಚಲ ಪಂದ್ಯವಾಡುತ್ತಿರುವ ಆಕಾಶ್ ದೀಪ್ 3 ವಿಕೆಟ್ ಕಬಳಿಸಿದ್ದಾರೆ. ಕುಲದೀಪ್ ಯಾದವ್ ಗೆ ಯಾವುದೇ ವಿಕೆಟ್ ಸಿಗಲಿಲ್ಲ.

ಬಹುಶಃ ಜೋ ರೂಟ್ ನಿಂತು ಆಡದೇ ಇದ್ದಿದ್ದರೆ ಇಂಗ್ಲೆಂಡ್ ಪರಿಸ್ಥಿತಿ ಇನ್ನಷ್ಟು ಹೀನಾಯವಾಗುತ್ತಿತ್ತು. ಆದರೆ ರೂಟ್ ಟಿಪಿಕಲ್ ಟೆಸ್ಟ್ ಇನಿಂಗ್ಸ್ ಮೂಲಕ ತಂಡಕ್ಕೆ ಆಸರೆಯಾದರು. ಭಾರತ ಇದೀಗ ಇನಿಂಗ್ಸ್ ಆರಂಭಿಸಿದ್ದು ನೋ ಬಾಲ್ ಮೂಲಕ ಖಾತೆ ತೆರೆದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments