Webdunia - Bharat's app for daily news and videos

Install App

IND vs ENG: ತಂಡ ಗೆಲ್ಲುವುದನ್ನು ಇಣುಕಿ ನೋಡಿ ಖುಷಿಪಟ್ಟ ರೋಹಿತ್ ಶರ್ಮಾ

Krishnaveni K
ಶನಿವಾರ, 9 ಮಾರ್ಚ್ 2024 (15:07 IST)
Photo Courtesy: Twitter
ಧರ್ಮಶಾಲಾ: ಇಂಗ್ಲೆಂಡ್ ವಿರುದ್ದ ಅಂತಿಮ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಇನಿಂಗ್ಸ್ ಅಂತರದಿಂದ ಗೆದ್ದುಕೊಂಡು ಸರಣಿಯನ್ನೇ ತನ್ನದಾಗಿಸಿಕೊಂಡಿದೆ. ಆದರೆ ಇಂದು ನಾಯಕ ರೋಹಿತ್ ಶರ್ಮಾ ಬೆನ್ನು ನೋವಿನಿಂದಾಗಿ ಮೈದಾನಕ್ಕಿಳಿಯಲಿಲ್ಲ.

ಮೊದಲ ಇನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ತಂಡವನ್ನು ಉತ್ತಮ ಸ್ಥಿತಿಗೆ ತಂದಿದ್ದರು. ಆದರೆ ಸುದೀರ್ಘ ಅವಧಿಗೆ ಬ್ಯಾಟಿಂಗ್ ಮಾಡಿ ಬಳಲಿದ್ದ ರೋಹಿತ್ ಇಂದು ಮೈದಾನಕ್ಕಿಳಿಯಲಿಲ್ಲ. ಅವರ ಬದಲು ಉಪನಾಯಕ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಿದರು.

ತಮ್ಮ ಅನುಪಸ್ಥಿತಿಯಲ್ಲೂ ಯಂಗ್ ಇಂಡಿಯನ್ ಟೀಂ ಗೆಲುವಿನತ್ತ ಸಾಗುತ್ತಿದ್ದರೆ ರೋಹಿತ್ ಶರ್ಮಾ ಬಾಲ್ಕನಿಯಿಂದಲೇ ಇಣುಕಿ ನೋಡಿ ಖುಷಿಪಡುತ್ತಿರುವ ದೃಶ‍್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟೀಂ ಇಂಡಿಯಾ ಗೆಲುವಿನ  ಬಳಿಕ ಮೈದಾನಕ್ಕಿಳಿದ ರೋಹಿತ್ ತಂಡದ ಸದಸ್ಯರನ್ನು ಅಭಿನಂದಿಸಿದರು.

ಈ ಸರಣಿಯಲ್ಲಿ ಕೆಎಲ್ ರಾಹುಲ್, ವಿರಾಟ್ ಕೊಹ್ಲಿಯಂತಹ ಅನುಭವಿಗಳ ಅನುಪಸ್ಥಿತಿಯಲ್ಲೂ ಯುವ ಬ್ಯಾಟಿಗರನ್ನು ಕಟ್ಟಿಕೊಂಡು ಇಂಗ್ಲೆಂಡ್ ವಿರುದ್ಧ ಸತತ ನಾಲ್ಕು ಟೆಸ್ಟ್ ಪಂದ್ಯ ಗೆಲುವಿಗೆ ಕಾರಣವಾಗಿದ್ದು ರೋಹಿತ್ ಶರ್ಮಾ ನಾಯಕತ್ವ. ಇದಕ್ಕಾಗಿ ಫ್ಯಾನ್ಸ್ ಅವರನ್ನು ಕೊಂಡಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments