ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಳೆಯಿಂದ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಟಿ20 ಸರಣಿಯನ್ನು ಎಲ್ಲಿ ಲೈವ್ ಆಗಿ ವೀಕ್ಷಿಸಬಹುದು ಎಂದು ಗಮನಿಸಿ.
ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ನಾಳೆಯಿಂದ ಆರಂಭವಾಗಲಿದೆ. ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳೂ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7 ಗಂಟೆಗೆ ಆರಂಭವಾಗಲಿದೆ.
ಮೊದಲ ಪಂದ್ಯ ಜನವರಿ 22 ರಂದು ಕೋಲ್ಕತ್ತಾದಲ್ಲಿ ಎರಡನೇ ಪಂದ್ಯ ಜನವರಿ 25 ರಂದು ಚೆನ್ನೈನಲ್ಲಿ, ಮೂರನೇ ಪಂದ್ಯ ಜನವರಿ 28 ರಂದು ರಾಜ್ ಕೋಟ್ ನಲ್ಲಿ, ನಾಲ್ಕನೇ ಪಂದ್ಯ ಜನವರಿ 31 ರಂದು ಪುಣೆಯಲ್ಲಿ ಮತ್ತು ಅಂತಿಮ ಪಂದ್ಯ ಫೆಬ್ರವರಿ 2 ರಂದು ಮುಂಬೈನಲ್ಲಿ ನಡೆಯಲಿದೆ. ಇದಾದ ಬಳಿಕ ಫೆಬ್ರವರಿ 6, 9 ಮತ್ತು 12 ರಂದು ಕ್ರಮವಾಗಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ಪಂದ್ಯದ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್, ಹಾಟ್ ಸ್ಟಾರ್ ಆಪ್ ನಲ್ಲಿ ವೀಕ್ಷಿಸಬಹುದು. ಇದಲ್ಲದೆ ಡಿಡಿ ಸ್ಪೋರ್ಟ್ಸ್ ನಲ್ಲಿ ಲೈವ್ ವೀಕ್ಷಣೆಗೆ ಅವಕಾಶವಿರಲಿದೆ.