IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

Krishnaveni K
ಬುಧವಾರ, 16 ಜುಲೈ 2025 (10:05 IST)
ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಮೂರು ಪಂದ್ಯಗಳು ಮುಕ್ತಾಯವಾಗಿದೆ. ಇದೀಗ ನಾಲ್ಕನೇ ಪಂದ್ಯ ಎಲ್ಲಿ ಯಾವಾಗ ಇಲ್ಲಿದೆ ವಿವರ.

ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಸೋತು ಅಭಿಮಾನಿಗಳ ಹೃದಯ ಚೂರಾಗಿತ್ತು. ಗೆಲುವಿನ ಹೊಸ್ತಿಲವರೆಗೂ ಬಂದು ಸೋತು ನಿರಾಸೆ ಅನುಭವಿಸಿತ್ತು. ಇದರಿಂದ ಹೊರಬಂದು ಭಾರತೀಯ ಆಟಗಾರರು ನಾಲ್ಕನೇ ಪಂದ್ಯಕ್ಕೆ ಸಿದ್ಧರಾಗಬೇಕಿದೆ.

ಈಗಾಗಲೇ ಭಾರತ ಸರಣಿಯಲ್ಲಿ 1-2 ರಿಂದ ಹಿನ್ನಡೆ ಅನುಭವಿಸಿರುವುದರಿಂದ ನಾಲ್ಕನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯವನ್ನು ಸೋತರೆ ಸರಣಿ ಗೆಲ್ಲುವ ಅವಕಾಶ ಕಳೆದುಕೊಳ್ಳಲಿದೆ. ಹೀಗಾಗಿ ನಾಲ್ಕನೇ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಲಿದೆ.

ನಾಲ್ಕನೇ ಟೆಸ್ಟ್ ಪಂದ್ಯ ಜುಲೈ 23 ರಿಂದ 27 ರವರೆಗೆ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆಯಲಿದೆ. ಕಳೆದ ಪಂದ್ಯದ ಸೋಲಿನ ಕಹಿಯಿಂದ ಹೊರಬಂದು ಮುಂದಿನ ಪಂದ್ಯಕ್ಕೆ ಸಿದ್ಧರಾಗಲು ಟೀಂ ಇಂಡಿಯಾಗೆ ಒಂದು ವಾರದ ಕಾಲಾವಕಾಶ ಸಿಗಲಿದೆ. ಈ ಪಂದ್ಯವೂ ಭಾರತೀಯ ಕಾಲಮಾನ ಪ್ರಕಾರ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

ಮುಂದಿನ ಸುದ್ದಿ
Show comments