Publish Date: Sat, 11 Jul 2026 (22:24 IST)
Updated Date: Sat, 11 Jul 2026 (22:27 IST)
ಲಂಡನ್: ಕ್ರಾಂತಿ ಗೌಡ್ ಅವರ ಪರಿಣಾಮಕಾರಿ ದಾಳಿಯ ನೆರವಿನಿಂದ ಭಾರತ ತಂಡವು ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಪ್ರಾಬಲ್ಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡುದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 285 ರನ್ ಗಳಿಸಿದರೆ, ಇಂಗ್ಲೆಂಡ್ ಕೇವಲ 170 ರನ್‌ಗಳಿಗೆ ಆಲೌಟ್ ಆಯಿತು. ಕ್ರಾಂತಿ ಗೌಡ್ ಅವರ 5 ವಿಕೆಟ್‌ಗಳ ಅದ್ಭುತ ಪ್ರದರ್ಶನದಿಂದ ಭಾರತ 115 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ವನಿತಾ ತಂಡಗಳ ನಡುವೆ ಮೊಟ್ಟ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸ್ಮೃತಿ ಮಂದಾನ ಮತ್ತು ಹರ್ಮನ್‌ಪ್ರೀತ್ ಅವರ ಅರ್ಧಶತಕಗಳ ಬಲದಿಂದ ಮೊದಲ ಇನ್ನಿಂಗ್ಸ್‌ನಲ್ಲಿ 285 ರನ್ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಇನ್ನಿಂಗ್ಸ್ ಆರಂಭಿಸಿದ ಆತಿಥೇಯ ಇಂಗ್ಲೆಂಡ್ ತಂಡ ಪಂದ್ಯದ ಎರಡನೇ ದಿನದ ಎರಡನೇ ಸೆಷನ್ನಲ್ಲಿಯೇ ತನ್ನೇಲ್ಲ ವಿಕೆಟ್ ಕಳೆದುಕೊಂಡು 170 ರನ್ ಕಲೆಹಾಕಿತು. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 115 ರನ್‌ಗಳ ಮುನ್ನಡೆ ಪಡೆದುಕೊಂಡಿದೆ.
ಇಂಗ್ಲೆಂಡ್ ಪರ ಆಮಿ ಜೋನ್ಸ್ 52 ರನ್‌ಗಳ ಇನ್ನಿಂಗ್ಸ್ ಆಡಿದರೆ, ನ್ಯಾಟ್ ಸಿವರ್-ಬ್ರಂಟ್ 44 ರನ್‌ಗಳ ಕಾಣಿಕೆ ನೀಡಿದರು. ಭಾರತದ ಪರ ಬೌಲಿಂಗ್ನಲ್ಲಿ ಮಿಂಚಿದ ಕ್ರಾಂತಿ ಗೌಡ್ 5 ವಿಕೆಟ್‌ಗಳ ಗೊಂಚಲು ಪಡೆದರು. ಸಯಾಲಿ ಸತ್ಘರೆ ಮತ್ತು ಸ್ನೇಹಾ ರಾಣಾ ತಲಾ ಎರಡು ವಿಕೆಟ್ ಪಡೆದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ