IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಅಂತಿಮ ಟೆಸ್ಟ್ ನಡೆಯೋದೇ ಅನುಮಾನ

Krishnaveni K
ಸೋಮವಾರ, 4 ಮಾರ್ಚ್ 2024 (11:30 IST)
ಧರ್ಮಶಾಲಾ: ಭಾರತ ಮತ್ತು ಇಂಗ್ಲೆಂಡ್ ನಡುವೆ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯ ನಡೆಯುವುದೇ ಅನುಮಾನವೆನ್ನಲಾಗುತ್ತಿದೆ.

ಧರ್ಮಶಾಲಾದಲ್ಲಿ ಈಗಾಗಲೇ ಅಂತಿಮ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆದಿದೆ. ಟೀಂ ಇಂಡಿಯಾದ ಕೆಲವು ಆಟಗಾರರು ಈಗಾಗಲೇ ಇಲ್ಲಿಗೆ ಬಂದಿಳಿದಿದ್ದಾರೆ. ಆದರೆ ಅಧಿಕೃತವಾಗಿ ತಂಡ ಇಂದು ಅಥವಾ ನಾಳೆಯಿಂದ ಅಭ್ಯಾಸ ಆರಂಭಿಸುವ ನಿರೀಕ್ಷೆಯಿದೆ. ಆದರೂ ಈ ಪಂದ್ಯದ ಮೇಲೆ  ಈಗ ಹವಾಮಾನದ ಕಾರ್ಮೋಡ ಕವಿದಿದೆ.

ಭಾರತ ತಂಡ ಇಲ್ಲಿಗೆ ಕಾಲಿಟ್ಟ ಗಳಿಗೆಯಿಂದ ಧರ್ಮಶಾಲಾದಲ್ಲಿ ಜೋರಾಗಿ ಮಳೆಯಾಗುತ್ತಿದೆ. ಇದು ಇನ್ನೂ ಕೆಲವು ದಿನ ಮುಂದುವರಿಯುವ ಸಾಧ‍್ಯತೆಯಿದೆ. ಹೀಗಾಗಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಬಹುದು. ಇದರಿಂದಾಗಿ ಪಂದ್ಯ ನಡೆಯುವುದೇ ಅನುಮಾನ ಎನ್ನುವ ಸ್ಥಿತಿಯಿದೆ.

ಭಾರತ ತಂಡ ಈಗಾಗಲೇ ಸರಣಿಯಲ್ಲಿ 3-1 ರಿಂದ ಮುನ್ನಡೆಯಲ್ಲಿದ್ದು, ಕೊನೆಯ ಪಂದ್ಯದ ಫಲಿತಾಂಶ ಟೀಂ ಇಂಡಿಯಾ ಮೇಲೆ ಯಾವುದೇ ಪರಿಣಾಮ ಬೀರದು. ಕೊನೆಯ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಕಮ್ ಬ್ಯಾಕ್ ಮಾಡಿದ್ದಾರೆ. ಫಲಿತಾಂಶ ಏನೇ ಇದ್ದರೂ ಈ ಪಂದ್ಯವನ್ನು ವೀಕ್ಷಿಸಲು ಕಾದಿರುವ ಪ್ರೇಕ್ಷಕರಿಗೆ ನಿರಾಸೆಯಾಗಲಿದೆ. ಯಾಕೆಂದರೆ ಇನ್ನು ಎರಡು ತಿಂಗಳಿಗೆ ಟೀಂ ಇಂಡಿಯಾ ಅಂತಾರಾಷ್ಟ್ರೀಯ ಸರಣಿ ಆಡುತ್ತಿಲ್ಲ. ಐಪಿಎಲ್ ಮುಗಿದ ಬಳಿಕ ನೇರವಾಗಿ ಟಿ20 ವಿಶ್ವಕಪ್ ನಲ್ಲಿ ಕಣಕ್ಕಿಳಿಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments