Webdunia - Bharat's app for daily news and videos

Install App

INDvsENG test: ತವರಿನಲ್ಲಿ ಶತಕ ಸಿಡಿಸಿ ಮಿಂಚಿದ ರವೀಂದ್ರ ಜಡೇಜಾ

Krishnaveni K
ಗುರುವಾರ, 15 ಫೆಬ್ರವರಿ 2024 (17:33 IST)
Photo Courtesy: Twitter
ರಾಜ್ ಕೋಟ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿದೆ.

ರೋಹಿತ್ ಶರ್ಮಾ ಬಳಿಕ ರವೀಂದ್ರ ಜಡೇಜಾ ಕೂಡಾ ಶತಕ ಗಳಿಸಿದ್ದಾರೆ. ತವರಿನ ಅಂಗಣದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಜಡೇಜಾ 3000 ರನ್ ಕೂಡಾ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 200 ವಿಕೆಟ್ ಮತ್ತು  3000 ರನ್ ಗಳಿಸಿದ ಮೂರನೇ ಭಾರತೀಯ ಆಟಗಾರ ಎಂಬ ದಾಖಲೆ ಮಾಡಿದರು. ಇದಕ್ಕೆ ಮೊದಲು ರವಿಚಂದ್ರನ್ ಅಶ್ವಿನ್ ಮತ್ತು ಕಪಿಲ್ ದೇವ್ ಈ ಸಾಧನೆ ಮಾಡಿದ್ದರು.

ಇದಕ್ಕೆ ಮೊದಲು ರೋಹಿತ್ ಶರ್ಮಾ ಜೊತೆಗೆ ರವೀಂದ್ರ ಜಡೇಜಾ 204 ರನ್ ಗಳ ಜೊತೆಯಾಟವಾಡಿದರು. ಆದರೆ ರೋಹಿತ್ ಶರ್ಮಾ 131 ರನ್ ಗಳಿಸಿ ಔಟಾದರು. ಬಹಳ ದಿನಗಳ ನಂತರ ಟೆಸ್ಟ್ ಕ್ರಿಕೆಟ್ ನಲ್ಲಿ ಭರ್ಜರಿ ಆಟವಾಡಿದ ರೋಹಿತ್ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿದರು.

ಸರ್ಫರಾಜ್ ಖಾನ್ ಅರ್ಧಶತಕ
ಬಯಸಿ ಬಯಸಿ ಭಾರತ ತಂಡದಲ್ಲಿ ಅವಕಾಶ ಪಡೆದ ಸರ್ಫರಾಜ್ ಖಾನ್ ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡು ಅರ್ಧಶತಕ ಸಿಡಿಸಿ ಮಿಂಚಿದರು. 66 ಎಸೆತಗಳಿಂದ 62 ರನ್ ಸಿಡಿಸಿದ ಅವರು ದುರದೃಷ್ಟವಶಾತ್ ರನೌಟ್ ಆದರು.  ಆದರೆ ಅವರ ಈ ಇನಿಂಗ್ಸ್ ಗೆ ಮೆಚ್ಚುಗೆ ವ್ಯಕ್ತವಾಯಿತು. ಮಾರ್ಕ್ ವುಡ್ 3 ವಿಕೆಟ್, ಟಾಮ್ ಹಾರ್ಟ್ರ್ಲೀ 1 ವಿಕೆಟ್ ತಮ್ಮದಾಗಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments