Webdunia - Bharat's app for daily news and videos

Install App

IND vs ENG test: ಶತಕ ಸಿಡಿಸಿ ದಾಖಲೆ ಮಾಡಿದ ರೋಹಿತ್ ಶರ್ಮಾ

Krishnaveni K
ಗುರುವಾರ, 15 ಫೆಬ್ರವರಿ 2024 (15:16 IST)
Photo Courtesy: Twitter
ರಾಜ್ ಕೋಟ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ.

ರೋಹಿತ್ ಶರ್ಮಾಗೆ ಇದು ಟೆಸ್ಟ್ ಕ್ರಿಕೆಟ್ ನಲ್ಲಿ 11 ನೇ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 47 ಶತಕವಾಗಿತ್ತು. ಈ ಮೂಲಕ ಭಾರತದ ಪರ ಆರಂಭಿಕರಾಗಿ ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರು. ಇದು ಆರಂಭಿಕರಾಗಿ ರೋಹಿತ್ ಗೆ ಮೂರನೇ ಶತಕವಾಗಿತ್ತು. ಗವಾಸ್ಕರ್ 4 ಶತಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್ ಹೊರತಾಗಿ ಕೆಎಲ್ ರಾಹುಲ್, ವಿಜಯ್ ಮರ್ಚೆಂಟ್, ಮುರಳಿ ವಿಜಯ್ ಕೂಡಾ 3 ಶತಕ ಸಿಡಿಸಿದ್ದರು.

ಟಾಸ್ ಗೆದ್ದು ಇಂದು ರೋಹಿತ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಆರಂಭದಲ್ಲಿಯೇ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಈ ವೇಳೆ  ಜೊತೆಯಾದ ರೋಹಿತ್ ಮತ್ತು ರವೀಂದ್ರ ಜಡೇಜಾ ಇದುವರೆಗೆ 181 ರನ್ ಗಳ ಜೊತೆಯಾಟವಾಡಿದ್ದಾರೆ. ರೋಹಿತ್ ಇತ್ತೀಚೆಗಿನ ವರದಿ ಬಂದಾಗ 3 ಸಿಕ್ಸರ್, 12 ಬೌಂಡರಿ ಸಹಿತ 120 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ರೋಹಿತ್ ಗೆ ತಕ್ಕ ಸಾಥ್ ನೀಡುತ್ತಿರುವ ಜಡೇಜಾ ತವರಿನ ಅಂಗಣದಲ್ಲಿ ಭರ್ಜರಿ ಆಟವಾಡುತ್ತಿದ್ದು 78 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಇತ್ತೀಚೆಗಿನ ವರದಿ ಬಂದಾಗ ಭಾರತ 3 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿದೆ. ಇಂಗ್ಲೆಂಡ್ ಪರ ಮಾರ್ಕ್ ವುಡ್ 2, ಟಾಮ್ ಹಾರ್ಟ್ಲೀ 1 ವಿಕೆಟ್ ಕಬಳಿಸಿದ್ದಾರೆ. ತಂಡ ಸಂಕಷ್ಟದಲ್ಲಿದ್ದಾಗ ಜೊತೆಯಾದ ಈ ಜೋಡಿ ಭಾರತಕ್ಕೆ ಸುಭದ್ರ ಅಡಿಪಾಯ ಹಾಕಿಕೊಟ್ಟಿದೆ.

 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments