IND vs ENG test: ಫಾರ್ಮ್ ಗೆ ಬಂದ ಗಿಲ್, ಭರ್ಜರಿ ಶತಕ

Krishnaveni K
ಭಾನುವಾರ, 4 ಫೆಬ್ರವರಿ 2024 (13:37 IST)
Photo Courtesy: Twitter
ವಿಶಾಖಪಟ್ಟಣ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಶುಬ್ಮನ್ ಗಿಲ್ ಶತಕ ಸಿಡಿಸಿ ಮಿಂಚಿದ್ದು, ಸೂಕ್ತ ಸಮಯದಲ್ಲಿ ಫಾರ್ಮ್ ಗೆ ಮರಳಿ ನಿಟ್ಟುಸಿರು ಬಿಟ್ಟಿದ್ದಾರೆ.

ದ್ವಿತೀಯ ಇನಿಂಗ್ಸ್ ನಲ್ಲಿ ಭಾರತ ಆರಂಭಿಕರಿಬ್ಬರನ್ನೂ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಗಿಲ್ ಸಮಯೋಚಿತ ಶತಕ ಸಿಡಿಸಿದರು. ಮೊದಲ ಇನಿಂಗ್ಸ್ ನಲ್ಲಿ ಭಾರತ 396 ರನ್ ಗಳಿಗೆ ಆಲೌಟ್ ಆಗಿತ್ತು. ಇಂಗ್ಲೆಂಡ್ 253 ರನ್ ಗಳಿಗೆ ಆಲೌಟ್ ಆಗಿತ್ತು. ಇದರೊಂದಿಗೆ 143 ರನ್ ಗಳ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಆರಂಭಿಸಿದ ಭಾರತ ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿದೆ. ಇದರೊಂದಿಗೆ 348 ರನ್ ಗಳ ಮುನ್ನಡೆ ಸಾಧಿಸಿದೆ

ರೋಹಿತ್ ಮತ್ತೆ ವಿಫಲ
ನಾಯಕ ರೋಹಿತ್ ಶರ್ಮಾ13 ರನ್ ಗಳಿಸಿ ಔಟಾಗುವ ಮೂಲಕ ಮತ್ತೆ ವೈಫಲ್ಯ ಅನುಭವಿಸಿದರು. ಕಳೆದ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್ ಗೆ ವಿಕೆಟ್ ಒಪ್ಪಿಸಿದರು. ಒಂದು ಹಂತದಲ್ಲಿ 30 ರನ್ ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಶ್ರೇಯಸ್ ಅಯ್ಯರ್ ಗೆ ಜೊತೆಯಾದ ಶುಬ್ಮನ್ ಗಿಲ್ ತಮ್ಮ ನೈಸರ್ಗಿಕ ಆಟದ ಮೂಲಕ ಗಮನ ಸೆಳೆದರು. ಆದರೆ ಅಯ್ಯರ್ ಮತ್ತೊಮ್ಮೆ 29 ರನ್ ಗಳಿಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಅವರ ಹಿಂದೆಯೇ 9 ರನ್ ಗಳಿಸಿ ರಜತ್ ಪಟಿದಾರ್ ಕೂಡಾ ಪೆವಿಲಿಯನ್ ಸೇರಿಕೊಂಡರು. ಇದೀಗ ಗಿಲ್ ಗೆ ತಕ್ಕ ಸಾಥ್ ನೀಡುತ್ತಿರುವ ಅಕ್ಷರ್ ಪಟೇಲ್ 38 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಶುಬ್ಮನ್ ಗಿಲ್ ಶತಕದ ಅಬ್ಬರ
ಇಂದು ಆರಂಭದಿಂದಲೂ ತಮ್ಮ ನೈಸರ್ಗಿಕ ಆಟಕ್ಕೆ ಒತ್ತು ನೀಡಿದ ಗಿಲ್ ಇತ್ತೀಚೆಗಿನ ವರದಿ ಬಂದಾಗ ಒಟ್ಟು 142 ಎಸೆತಗಳಿಂದ 2 ಸಿಕ್ಸರ್ ಸೇರಿದಂತೆ 102 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಳೆದ ಕೆಲವು ಇನಿಂಗ್ಸ್ ಗಳಿಂದ ಮಂಕಾಗಿದ್ದ ಗಿಲ್ ಇಂದು ಮತ್ತೆ ತಮ್ಮ ಹಳೆಯ ಫಾರ್ಮ್ ಪ್ರದರ್ಶಿಸಿದ್ದು ಎಲ್ಲರ ಮೊಗದಲ್ಲೂ ಸಮಾಧಾನ ತಂದಿತ್ತು. ಇದು ಅವರ ಟೆಸ್ಟ್ ವೃತ್ತಿ ಜೀವನದ ಮೂರನೇ ಶತಕವಾಗಿತ್ತು. ರನ್ ಬರಗಾಲ ಎದುರಿಸುತ್ತಿದ್ದ ಗಿಲ್ ರನ್ನು ತಂಡದಿಂದ ಕಿತ್ತು ಹಾಕಬೇಕೆಂದು ಒತ್ತಾಯ ಹೆಚ್ಚಿತ್ತು. ಈ ಸಂದರ್ಭದಲ್ಲಿಯೇ ಅವರು ಶತಕ ಸಿಡಿಸುವ ಮೂಲಕ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments