Webdunia - Bharat's app for daily news and videos

Install App

IND vs ENG: ಟೀಂ ಇಂಡಿಯಾ ಗೆದ್ದ ಬಳಿಕ ವಿರಾಟ್ ಕೊಹ್ಲಿ ಪೋಸ್ಟ್ ವೈರಲ್

Krishnaveni K
ಸೋಮವಾರ, 26 ಫೆಬ್ರವರಿ 2024 (15:05 IST)
Photo Courtesy: Twitter
ರಾಂಚಿ: ಪುತ್ರನ ಜನನದ ಖುಷಿಯಲ್ಲಿರುವ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಈಗ ಕ್ರಿಕೆಟ್ ನಿಂದ ಸಂಪೂರ್ಣ ದೂರವಿದ್ದಾರೆ ಎಂದು ಅಭಿಮಾನಿಗಳು ಬೇಸರದಲ್ಲಿದ್ದಾರೆ.

ಆದರೆ ಇದೀಗ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯವನ್ನು ಭರ್ಜರಿಯಾಗಿ ಗೆದ್ದ ಬಳಿಕ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಪ್ರಕಟಿಸಿದ್ದು, ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾ, ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವ ಕೊಹ್ಲಿಯ ಈ ಸಂದೇಶ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಹೌದು.. ನಮ್ಮ ಯುವ ತಂಡದ ಅದ್ಭುತ ಸರಣಿ ಗೆಲುವು ಇದು. ಯುವ ಕ್ರಿಕೆಟಿಗರು ಧೈರ್ಯ, ಬಧ‍್ಥತೆ ಮತ್ತು ಮಾನಸಿಕ ಸ್ಥೈರ್ಯ ತೋರಿದರು’ ಎಂದು ಕೊಹ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಕೊಹ್ಲಿ ಇಂತಹದ್ದೊಂದು ಸಂದೇಶ ಹಾಕುತ್ತಿದ್ದಂತೇ ಕಾಮೆಂಟ್ ಮಾಡಿರುವ ನೆಟ್ಟಿಗರು ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಯಾವಾಗ ವಾಪಸ್ ಬರ್ತೀರಿ ಎಂದು ಕೇಳುತ್ತಿದ್ದಾರೆ.

ಪತ್ನಿ ಅನುಷ್ಕಾ ಶರ್ಮಾ ಹೆರಿಗೆಯ ನಿಮಿತ್ತ ಕೊಹ್ಲಿ ಕಳೆದ ಕೆಲವು ದಿನಗಳಿಂದ ಲಂಡನ್ ನಲ್ಲಿದ್ದಾರೆ. ಪುತ್ರ ಅಕಾಯ್ ಜನನದ ವೇಳೆ ಪತ್ನಿಯ ಜೊತೆಗಿರಲು ಕೊಹ್ಲಿ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದಾರೆ. ಹೀಗಾಗಿ ಅಭಿಮಾನಿಗಳು ಅವರನ್ನು ತಂಡದಲ್ಲಿ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲಿದ್ದರೆ ಎಕ್ಸ್ ಟ್ರಾ ಮನರಂಜನೆ ಇರುತ್ತದೆ. ಆದರೆ ಅವರಿಲ್ಲದೇ ಮನರಂಜನೆ ಮಿಸ್ ಮಾಡಿಕೊಳ‍್ಳುತ್ತಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments