Daily Horoscope

Select Your Language

Notifications

webdunia
webdunia
webdunia
webdunia

IND vs NZ: ಭಾರತ ವರ್ಸಸ್ ನ್ಯೂಜಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ, ಎಲ್ಲಿ ಲೈವ್ ವೀಕ್ಷಿಸಬೇಕು

Kohli-Gill-KL Rahul
Photo Credit: X
ವಡೋದರಾ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿದ್ದು, ಯಾವಾಗ, ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ.

ಇತ್ತೀಚೆಗಿನ ದಿನಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಕಾರಣಕ್ಕೆ ಏಕದಿನ ಸರಣಿಗೆ ಭಾರೀ ಡಿಮ್ಯಾಂಡ್ ಇದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ಏಕದಿನ ಪಂದ್ಯಗಳ ಟಿಕೆಟ್ ಗಳು ನಿಮಿಷಗಳಲ್ಲೇ ಸೋಲ್ಡ್ ಔಟ್ ಆಗುತ್ತಿರುವುದು.

ಇದೀಗ ನಾಳೆಯಿಂದ ಏಕದಿನ ಸರಣಿಯಲ್ಲಿ ಈ ಇಬ್ಬರು ದಿಗ್ಗಜರು ಆಡುವುದನ್ನೇ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ. ಮೊದಲ ಪಂದ್ಯ ನಾಳೆ ವಡೋದರಾದಲ್ಲಿ ನಡೆಯಲಿದೆ. ಒಟ್ಟು ಮೂರು ಪಂದ್ಯ ನಡೆಯಲಿದೆ. ಎರಡನೇ ಪಂದ್ಯ ಜನವರಿ 14 ರಂದು ರಾಜ್ ಕೋಟ್ ನಲ್ಲಿ ನಡೆಯಲಿದೆ.

ಸರಣಿಯ ಅಂತಿಮ ಪಂದ್ಯ ಜನವರಿ 18 ರಂದು ಇಂದೋರ್ ನಲ್ಲಿ ನಡೆಯಲಿದೆ. ಸರಣಿಯ ಎಲ್ಲಾ ಪಂದ್ಯಗಳೂ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ. ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಅಥವಾ ಜಿಯೋ ಹಾಟ್ ಸ್ಟಾರ್ ಆಪ್ ನಲ್ಲಿ ವೀಕ್ಷಿಸಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಸಿಬಿ ಅಂದ್ರೇನೇ ಥ್ರಿಲ್ಲರ್: ಗೆಲುವಿನ ಬಳಿಕ ಸ್ಮೃತಿ ಮಂಧಾನ ಹೇಳಿಕೆ ವೈರಲ್