Publish Date: Mon, 21 Oct 2024 (12:44 IST)
Updated Date: Mon, 21 Oct 2024 (12:47 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾಕ್ಕೆ ಎರಡನೇ ಟೆಸ್ಟ್ ಪಂದ್ಯಕ್ಕೆ ಮುನ್ನ ದೊಡ್ಡ ಆಘಾತ ಎದುರಾಗಿದೆ.
ಮೊದಲ ಟೆಸ್ಟ್ ಪಂದ್ಯ ಸೋತ ಟೀಂ ಇಂಡಿಯಾ ಈಗ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಮುಂಬೈನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆದ್ದೇ ಗೆಲ್ಲುವೆ ಎಂಬ ವಿಶ್ವಾಸದಲ್ಲಿರುವ ಟೀಂ ಇಂಡಿಯಾಗೆ ಸ್ಟಾರ್ ಆಟಗಾರನ ಅಲಭ್ಯತೆ ಆಘಾತ ತರಲಿದೆ.
ಮೊದಲ ಟೆಸ್ಟ್ ಪಂದ್ಯದ ವೇಳೆ ಮೊಣಕಾಲಿಗೆ ಚೆಂಡು ಬಡಿದ ಪರಿಣಾಮ ವಿಕೆಟ್ ಕೀಪರ್ ರಿಷಭ್ ಪಂತ್ ಕೆಲವು ಸಮಯ ಮೈದಾನಕ್ಕೇ ಇಳಿದಿರಲಿಲ್ಲ. ಆದರೆ ದ್ವಿತೀಯ ಇನಿಂಗ್ಸ್ ನಲ್ಲಿ ಅವರು ಅದ್ಭುತವಾಗಿ ಬ್ಯಾಟ್ ಮಾಡಿ ಭಾರತದ ಮಾನ ಕಾಪಾಡಿದ್ದರು. ಇದೀಗ ಅವರು ಗಾಯದ ಕಾರಣದಿಂದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಕಂಡುಬರುತ್ತಿದೆ.
ರಿಷಭ್ ಪಂತ್ ಇತ್ತೀಚೆಗಿನ ದಿನಗಳಲ್ಲಿ ಭಾರತ ತಂಡಕ್ಕೆ ಟೆಸ್ಟ್ ಕ್ರಿಕೆಟ್ ನಲ್ಲಿ ಆಪತ್ ಬಾಂಧವರಂತೆ ಆಡುತ್ತಿದ್ದಾರೆ. ಇದೀಗ ನಿರ್ಣಾಯಕ ಘಟ್ಟದಲ್ಲಿ ಅವರು ತಂಡದಿಂದ ಹೊರುಗಳಿದರೆ ಭಾರತ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ. ಒಂದು ವೇಳೆ ರಿಷಭ್ ಹೊರಗುಳಿದರೆ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಬಹುದು.
Krishnaveni K
Publish Date: Mon, 21 Oct 2024 (12:44 IST)
Updated Date: Mon, 21 Oct 2024 (12:47 IST)