IND vs NZ Test: ಕೆಎಲ್ ರಾಹುಲ್ ಗೆ ಮತ್ತೊಂದು ಚಾನ್ಸ್ ಕೊಡಬೇಕಾ

Krishnaveni K
ಗುರುವಾರ, 24 ಅಕ್ಟೋಬರ್ 2024 (08:40 IST)
ಪುಣೆ:  ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದಿನಿಂದ ದ್ವಿತೀಯ ಟೆಸ್ಟ್ ಪ್ರಾರಂಭವಾಗುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಪುಣೆಯಲ್ಲಿ ಪಂದ್ಯ ಆರಂಭವಾಗಲಿದೆ. ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಗೆ ಅವಕಾಶ ಸಿಗುತ್ತಾ ಎನ್ನುವುದೇ ಎಲ್ಲರ ಕುತೂಹಲವಾಗಿದೆ.

ಭಾರತಕ್ಕೆ ಈ ಪಂದ್ಯವನ್ನು ಗೆಲ್ಲುವುದು ಎರಡು ರೀತಿಯಿಂದ ಮುಖ್ಯವಾಗಿದೆ. ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ನಂ.1 ಸ್ಥಾನ ಉಳಿಸಿಕೊಳ್ಳಲು ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಇನ್ನೊಂದೆಡೆ  ಈ ಸರಣಿ ಸೋಲು ತಪ್ಪಿಸಲೂ ಇಂದು ಗೆಲುವು ಅನಿವಾರ್ಯ.

ಹೀಗಾಗಿ ಇಂದಿನ ಪಿಚ್ ಭಾರತಕ್ಕೆ ಅನುಕೂಲಕರವಾಗಿಯೇ ನಿರ್ಮಿಸಲಾಗಿದೆ ಎನ್ನಲಾಗಿದೆ. ಸ್ಪಿನ್ ಸ್ನೇಹಿ ಟ್ರ್ಯಾಕ್ ಮಾಡಲಾಗಿದ್ದು, ಬ್ಯಾಟಿಂಗ್ ಗೂ ಸಹಕಾರಿಯಾಗಿರಲಿದೆ. ಸ್ಪಿನ್ ಗೆ ಕೊಂಚವೇ ಅನುಕೂಲ ಸಿಕ್ಕರೂ ಭಾರತದ ರವಿಚಂದ್ರನ್ ಅಶ್ವಿನ್-ರವೀಂದ್ರ ಜಡೇಜಾ ಜೋಡಿಯೆದುರು ಎದುರಾಳಿಗಳಿಗೆ ನಿಲ್ಲಲು ಕಷ್ಟವಾಗಲಿದೆ.

ಇನ್ನು, ಈ ಪಂದ್ಯಕ್ಕೆ ಮುಖ್ಯವಾಗಿ ಎಲ್ಲರ ಕಣ್ಣು ಕೆಎಲ್ ರಾಹುಲ್ ಮೇಲಿದೆ. ರಾಹುಲ್ ಇತ್ತೀಚೆಗೆ ಹೇಳಿಕೊಳ್ಳುವಂತಹ ಫಾರ್ಮ್ ನಲ್ಲಿಲ್ಲ. ಸಂಕಷ್ಟದಲ್ಲಿ ತಂಡದ ಕೈ ಹಿಡಿಯುತ್ತಿಲ್ಲ ಎಂಬ ಅಪವಾದವಿದೆ. ಹೀಗಾಗಿ ಅವರನ್ನು ಹೊರಗಿಟ್ಟು ಶುಬ್ಮನ್ ಗಿಲ್ ಗೆ ಅವಕಾಶ ಕೊಡುತ್ತಾರಾ ನೋಡಬೇಕಿದೆ. ಜಿಯೋ ಸಿನಿಮಾ ಆಪ್ ನಲ್ಲಿ 9.30 ರಿಂದ ಪಂದ್ಯದ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ಮುಂದಿನ ಸುದ್ದಿ
Show comments