Webdunia - Bharat's app for daily news and videos

Install App

IND vs NZ Test: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿಗೆ ರೋಹಿತ್ ಶರ್ಮಾ ದೂಷಿಸಿದ್ದು ಯಾರನ್ನು

Krishnaveni K
ಶನಿವಾರ, 26 ಅಕ್ಟೋಬರ್ 2024 (16:44 IST)
ಪುಣೆ: ಎರಡನೇ ಟೆಸ್ಟ್ ಪಂದ್ಯವನ್ನು 113 ರನ್ ಗಳ ಅಂತರದಲ್ಲಿ ಸೋಲುವುದರೊಂದಿಗೆ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋತು ಮುಖಭಂಗ ಅನುಭವಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಸೋಲಿಗೆ ಇವರೇ ಕಾರಣ ಎಂದಿದ್ದಾರೆ.

ಕಳೆದ ಎರಡೂ ಪಂದ್ಯಗಳಲ್ಲಿ ತಂಡದ ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣವಾಗಿದೆ. ಅದರಲ್ಲೂ ಈ ಪಂದ್ಯದಲ್ಲಂತೂ ಅಗ್ರ ಬ್ಯಾಟಿಗರು ಎರಡೂ ಇನಿಂಗ್ಸ್ ಗಳಲ್ಲಿ ಎಡವಿದ್ದಾರೆ. ಪಂದ್ಯದ ಬಳಿಕ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ರೋಹಿತ್ ತಮ್ಮ ತಂಡದ ಸೋಲಿಗೆ ಬ್ಯಾಟಿಗರೇ ಕಾರಣ ಎಂದಿದ್ದಾರೆ.

ಈ ಸೋಲು ನಿಜಕ್ಕೂ ಬೇಸರ ತರುವಂತದ್ದು. ನ್ಯೂಜಿಲೆಂಡ್ ನಮಗಿಂತ ಚೆನ್ನಾಗಿ ಆಡಿತು. ನಾವು ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದು ಹೇಳಬಹುದಷ್ಟೇ. ಅದರಲ್ಲೂ ಬ್ಯಾಟಿಂಗ್  ವಿಭಾಗ ಸಾಕಷ್ಟು ರನ್ ಗಳಿಸುವಲ್ಲಿ ವಿಫಲವಾಗಿದ್ದೇ ಸೋಲಿಗೆ ಕಾರಣವಾಯಿತು ಎಂದು ರೋಹಿತ್ ಬೇಸರ ವ್ಯಕ್ತಪಡಿಸಿದ್ದಾರೆ.

ಆದರೆ ವಾಂಖೆಡೆಯಲ್ಲಿ ನಾವು ಹೊಸ ಯೋಜನೆಯೊಂದಿಗೆ ಕಣಕ್ಕಿಳಿಯಲಿದ್ದೇವೆ. ನಮ್ಮ ಪ್ರದರ್ಶನ ಇದಕ್ಕಿಂತ ಭಿನ್ನವಾಗಿರಲಿದೆ ಎಂದು ರೋಹಿತ್ ಭರವಸೆ ನೀಡಿದ್ದಾರೆ. ಭಾರತೀಯ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ನ್ಯೂಜಿಲೆಂಡ್ ಇತಿಹಾಸ ನಿರ್ಮಿಸಿದರೆ ಭಾರತ 25 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿ ಸೋತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments