Webdunia - Bharat's app for daily news and videos

Install App

IND vs NZ Test: ಎರಡಂಕಿ ಮೊತ್ತಕ್ಕೆ ಆಲೌಟ್, ಟೀಂ ಇಂಡಿಯಾದ ಹೀನಾಯ ದಾಖಲೆಗಳ ಪಟ್ಟಿ

Krishnaveni K
ಗುರುವಾರ, 17 ಅಕ್ಟೋಬರ್ 2024 (14:34 IST)
Photo Credit: X
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 46 ರನ್ ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯ ದಾಖಲೆ ಬರೆದಿದೆ.

ಭಾರತದ ಅಗ್ರಮಾನ್ಯ ಬ್ಯಾಟಿಗರೆನಿಸಿಕೊಂಡ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಸಾಲಾಗಿ ಶೂನ್ಯ ಸಂಪಾದನೆ ಮಾಡಿದರು. ಉಳಿದಂತೆ ಹಿಟ್ ಮ್ಯಾನ್ ಖ್ಯಾತಿಯ ನಾಯಕ ರೋಹಿತ್ ಶರ್ಮಾ 2 ರನ್ ಗಳಿಸಿದರು. ಇದ್ದವರಲ್ಲಿ ಎರಡಂಕಿ ಗಳಿಸಿದ್ದು ಎಂದರೆ ಯಶಸ್ವಿ ಜೈಸ್ವಾಲ್ ಮತ್ತು ರಿಷಭ್ ಪಂತ್ ಮಾತ್ರ. ಜೈಸ್ವಾಲ್ 13, ರಿಷಭ್ 20 ರನ್ ಗಳಿಸಿದರು.

ಭಾರತ ತಂಡದ ಈ ಹೀನಾಯ ಪ್ರದರ್ಶನಕ್ಕೆ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಟಾಸ್ ಗೆದ್ದೂ ಭಾರತ ಈ ಒದ್ದೆ ಪಿಚ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನಿರ್ಧಾರಕ್ಕೆ ಕಟು ಟೀಕೆ ವ್ಯಕ್ತವಾಗಿದೆ. ಈ ಮೂಲಕ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ನಲ್ಲಿ ಮೂರನೇ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗಿ ಮುಖಭಂಗ ಅನುಭವಿಸಿದೆ.

2020 ರಲ್ಲಿ ಅಡಿಲೇಡ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 36 ರನ್ ಗಳಿಸಿದ್ದು ಈವರೆಗಿನ ಕನಿಷ್ಠ ಮೊತ್ತವಾಗಿದೆ.  1974 ರಲ್ಲಿ ಇಂಗ್ಲೆಂಡ್ ವಿರುದ್ಧ 42 ರನ್ ಗೆ ಆಲೌಟ್ ಆಗಿದ್ದು ಎರಡನೇ ಕನಿಷ್ಠ ಮೊತ್ತ. ಇತ್ತೀಚೆಗಿನ ವರ್ಷಗಳಲ್ಲೇ ಇಷ್ಟು ಕನಿಷ್ಠ ಮೊತ್ತಕ್ಕೆ ಆಲೌಟ್ ಆದ ಉದಾಹರಣೆಯೇ ಇರಲಿಲ್ಲ. ಅದೂ ಭಾರತೀಯ ಪಿಚ್ ನಲ್ಲಿ ಇದೇ ಮೊದಲು.

ಒಂದೇ ಇನಿಂಗ್ಸ್ ನಲ್ಲಿ ಐವರು ಡಕ್ ಔಟ್ ಆಗುವ ಮೂಲಕ ಎರಡನೇ ಗರಿಷ್ಠ ಡಕ್ ಔಟ್ ಕುಖ್ಯಾತಿಯನ್ನು ಟೀಂ ಇಂಡಿಯಾ ಆಟಗಾರರು ಪಡೆದುಕೊಂಡರು. ಏಷ್ಯಾ ಖಂಡದ ಪಿಚ್ ಗಳಲ್ಲೇ ಅತ್ಯಂತ ಕನಿಷ್ಠ ಮೊತ್ತಕ್ಕೆ ಆಲೌಟ್ ಆದ ಕುಖ್ಯಾತಿ ಭಾರತದ್ದಾಯಿತು. ಇದಕ್ಕೆ ಮೊದಲು ಪಾಕಿಸ್ತಾನ ವಿರುದ್ಧ ಫೈಸಲಾಬಾದ್ ನಲ್ಲಿ ವೆಸ್ಟ್ ಇಂಡೀಸ್ 53 ರನ್ ಗಳಿಗೆ ಆಲೌಟ್ ಆಗಿದ್ದು ದಾಖಲೆಯಾಗಿತ್ತು. ಇದೀಗ ಮೊದಲ ಇನಿಂಗ್ಸ್ ಆರಂಭಿಸಿರುವ ನ್ಯೂಜಿಲೆಂಡ್ ವಿಕೆಟ್ ನಷ್ಟವಿಲ್ಲದೇ 49 ರನ್ ಗಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments