Select Your Language

Notifications

webdunia
webdunia
webdunia
webdunia

IND vs NZ Test: ಕೊನೆಗೂ ಶುರುವಾಯ್ತು ಪಂದ್ಯ, ಟೀಂ ಇಂಡಿಯಾ ಬ್ಯಾಟಿಂಗ್

Rohit Sharma

Krishnaveni K

ಬೆಂಗಳೂರು , ಗುರುವಾರ, 17 ಅಕ್ಟೋಬರ್ 2024 (09:37 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ಟೆಸ್ಟ್ ಪಂದ್ಯ ಕೊನೆಗೂ ಇಂದು ವರುಣನ ಕೃಪೆಯಿಂದ ಆರಂಭವಾಗಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ನಿನ್ನೆಯ ದಿನವಿಡೀ ಮಳೆಯಿಂದಾಗಿ ರದ್ದಾಗಿತ್ತು. ಟಾಸ್ ಕೂಡಾ ನಡೆದಿರಲಿಲ್ಲ. ಆದರೆ ನಿನ್ನೆ ರಾತ್ರಿಯಿಂದ ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗಿದೆ. ಇಂದು ಮೋಡ ಕವಿದ ವಾತಾವರಣವಿದೆ. ಹಾಗಿದ್ದರೂ ಮಳೆಯಾಗಿರಲಿಲ್ಲ. ಹೀಗಾಗಿ ಇಂದು ಪಂದ್ಯ ಆರಂಭವಾಗಿದೆ.

ಭಾರತ ತಂಡ ಈ ಪಂದ್ಯಕ್ಕೆ ಮೂವರು ಸ್ಪಿನ್ನರ್ ಮತ್ತು ಇಬ್ಬರು ವೇಗಿಗಳೊಂದಿಗೆ ಕಣಕ್ಕಿಳಿದಿದೆ. ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಜೊತೆಗೆ ಕುಲದೀಪ್ ಯಾದವ್ ಕೂಡಾ ಸ್ಥಾನ ಪಡೆದಿದ್ದಾರೆ. ಹೀಗಾಗಿ ಆಕಾಶ್ ದೀಪ್ ತಂಡದಿಂದ ಹೊರಗುಳಿಯಬೇಕಾಗಿದೆ.

ಉಳಿದಂತೆ ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.


Share this Story:

Follow Webdunia kannada

ಮುಂದಿನ ಸುದ್ದಿ

IND vs NZ Test: ಟೀಂ ಇಂಡಿಯಾ ಆಟಗಾರರು ನಿನ್ನೆ ಏನು ಮಾಡಿದ್ರು, ಈವತ್ತೂ ಅದೇ ಗತಿಯಾ