ಪುಣೆ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಪುಣೆಯಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದದ್ದು ಯಾರು, ಆಡುವ ಬಳಗದಲ್ಲಿ ಯಾರಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಮೊದಲ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿತ್ತು. ಹೀಗಾಗಿ ಈ ಪಂದ್ಯವನ್ನು ಭಾರತ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯಕ್ಕೆ ಭಾರತ ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ನ್ಯೂಜಿಲೆಂಡ್ ತಂಡವೂ ಮ್ಯಾಟ್ ಹೆನ್ರಿ ಬದಲಿಗೆ ಸ್ಯಾಂಟ್ನರ್ ತಂಡಕ್ಕೆ ಸೇರಿಸಿಕೊಂಡಿದೆ.
ಇತ್ತ ಭಾರತ ತಂಡದಲ್ಲಿ ಮೂರು ಬದಲಾವಣೆಯಾಗಿದೆ. ಕಳಪೆ ಫಾರ್ಮ್ ನಲ್ಲಿರುವ ಕೆಎಲ್ ರಾಹುಲ್ ನಿರೀಕ್ಷೆಯಂತೇ ತಂಡದಿಂದ ಹೊರಗುಳಿದಿದ್ದಾರೆ. ಉಳಿದಂತೆ ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಕೂಡಾ ಸ್ಥಾನ ಕಳೆದುಕೊಂಡಿದ್ದಾರೆ. ಈ ಮೂವರ ಬದಲಿಗೆ ಆಕಾಶ್ ದೀಪ್, ಶುಬ್ಮನ್ ಗಿಲ್ ಮತ್ತು ವಾಷಿಂಗ್ಟನ್ ಸುಂದರ್ ಗೆ ಅವಕಾಶ ನೀಡಲಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ.
ನ್ಯೂಜಿಲೆಂಡ್ ತಂಡ: ಟಾಮ್ ಲಥಮ್ (ನಾಯಕ), ಡೆವನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೆರಿಲ್ ಮಿಚೆಲ್, ಟಾಮ್ ಬ್ಲಂಡರ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಅಝಾಜ್ ಪಟೇಲ್, ವಿಲಿಯಮ್ ರೂರ್ಕಿ.