Select Your Language

Notifications

webdunia
webdunia
webdunia
webdunia

IND vs NZ: ರೋಹಿತ್ ಶರ್ಮಾ, ಮೊಹಮ್ಮದ್ ಶಮಿ ಗೈರಾದರೆ ಈ ಇಬ್ಬರಿಗೆ ಚಾನ್ಸ್

Rohit Sharma-Shubman Gill

Krishnaveni K

ದುಬೈ , ಶನಿವಾರ, 1 ಮಾರ್ಚ್ 2025 (17:42 IST)
ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ನಾಳೆ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ, ಮೊಹಮ್ಮದ್ ಶಮಿ ಗೈರಾದರೆ ಈ ಇಬ್ಬರು ಕ್ರಿಕೆಟಿಗರಿಗೆ ಅವಕಾಶ ಸಿಗಲಿದೆ.

ರೋಹಿತ್ ಶರ್ಮಾ ಮತ್ತು ಮೊಹಮ್ಮದ್ ಶಮಿ ಕಳೆದ ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಸ್ನಾಯು ಸೆಳೆತಕ್ಕೊಳಗಾಗಿದ್ದರು. ಗಾಯ ಗಂಭೀರವಾಗಿಲ್ಲದೇ ಹೋದರೂ ಮುನ್ನೆಚ್ಚರಿಕೆ ಕ್ರಮವಾಗಿ ರೋಹಿತ್ ನಿನ್ನೆ ಅಭ್ಯಾಸ ನಡೆಸಿರಲಿಲ್ಲ.

ಮುಂದೆ ಭಾರತ ಸೆಮಿಫೈನಲ್ ನಂತಹ ಮಹತ್ವದ ಪಂದ್ಯವಾಡಬೇಕಿದೆ. ಈ ನಿಟ್ಟಿನಲ್ಲಿ ರೋಹಿತ್ ಮತ್ತು ಶಮಿಗೆ ನಾಳೆಯ ಪಂದ್ಯಕ್ಕೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಈ ಇಬ್ಬರು ಆಟಗಾರರಿಗೆ ವಿಶ್ರಾಂತಿ ನೀಡಿದರೆ ರಿಷಭ್ ಪಂತ್ ಮತ್ತು ಅರ್ಷ್ ದೀಪ್ ಸಿಂಗ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ.

ರೋಹಿತ್ ಅನುಪಸ್ಥಿತಿಯಲ್ಲಿ ಶುಬ್ಮನ್ ಗಿಲ್ ತಂಡದ ನಾಯಕರಾಗಲಿದ್ದಾರೆ. ಅರ್ಷ್ ದೀಪ್ ಮತ್ತು ರಿಷಭ್ ಇದುವರೆಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಯಾವುದೇ ಪಂದ್ಯವಾಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಅವರಿಗೆ ಅದೃಷ್ಟ ಖುಲಾಯಿಸುತ್ತಾ ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೇಸರಗೊಂಡಿದ್ದ ನೆಟ್ ಬೌಲರ್ ಗೆ ಮರೆಯಲಾಗದ ಗಿಫ್ಟ್ ಕೊಟ್ಟ ಶ್ರೇಯಸ್ ಅಯ್ಯರ್ (video)