ರಾಜ್‌ಪುರ: ಇಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಯ ಮೊದಲು ಬೌಲಿಂಗ್ ಆಯ್ದುಗೊಂಡಿದೆ.
ಇನ್ನೂ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಭಾರತ ತಂಡ ಐದು ಪಂದ್ಯಗಳ ಸರಣಿಯಲ್ಲಿ 1–0 ಅಂತರದಲ್ಲಿ ಮುನ್ನಡೆಯಲ್ಲಿದೆ.
ಮೊದಲ ಗೆಲುವಿನ ಖುಷಿಯಲ್ಲಿ ಎರಡನೇ ಪಂದ್ಯಾಟಕ್ಕಿಳಿದಿರುವ ಭಾರತ ತಂಡದಲ್ಲಿ ಭಾರೀ ಬದಲಾವಣೆಯಾಗಿದೆ. ತಂಡದಲ್ಲಿ ಜಸ್‌ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ಅವರ ಬದಲು ಕುಲದೀಪ್ ಯಾದವ್ ಹಾಗೂ ಹರ್ಷಿತ್ ರಾಣಾಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ.
ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ
ನ್ಯೂಜಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಾಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್‌ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಕಾರಿ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ