IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

Sampriya
ಭಾನುವಾರ, 23 ನವೆಂಬರ್ 2025 (18:26 IST)
Photo Credit X
ಗುವಾಹಟಿ: ದಕ್ಷಿಣ ಆಫ್ರಿಕಾ ತಂಡದ ಬಾಲಂಗೋಚಿಗಳ ಬ್ಯಾಟಿಂಗ್‌ ಅಬ್ಬರಕ್ಕೆ ಭಾರತದ ಬೌಲರ್‌ಗಳು ಬಳಲಿ ಬೆಂಡಾದರು. ಸೆನುರನ್ ಮುತ್ತುಸಾಮಿ ಶತಕ ಮತ್ತು ಮಾರ್ಕೊ ಯಾನ್ಸನ್‌ ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಬೃಹತ್‌ ಮೊತ್ತ ಕಲೆಹಾಕಿದೆ. 

ಗುವಹಾಟಿ ನಡೆಯುತ್ತಿರುವ ಭಾರತ ವಿರುದ್ಧದ 2ನೇ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾವು 489 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿದೆ. ಎರಡನೇ ದಿನದಾಟದ ಮೂರನೇ ಅವಧಿಯಲ್ಲಿ ಆಫ್ರಿಕಾ ತಂಡ ಆಲೌಟ್ ಆಗಿದೆ.

ತಂಡದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಉಪಯುಕ್ತ ಕಾಣಿಕೆಯ ಬೆನ್ನಲ್ಲೇ ಮಧ್ಯಮ ಕ್ರಮಾಂಕದ ಸೆನುರನ್ ಮುತ್ತುಸಾಮಿ ಶತಕ(109) ಸಿಡಿಸಿದರೆ,, ಬಿರುಸಿನ ಬ್ಯಾಟಿಂಗ್ ಮಾಡಿದ ಮಾರ್ಕೊ ಜಾನ್‌ಸೆನ್ 93 ರನ್ ಸಿಡಿಸಿ ತಂಡಕ್ಕೆ ಆಸರೆಯಾದರು. ಏಡನ್‌ ಮರ್ಕರಂ(38), ರಿಕಲ್ಟನ್ (35), ಟ್ರಿಸ್ಟನ್ ಸ್ಟಬ್ಸ್(49), ನಾಯಕ ತೆಂಬಾ ಬವುಮಾ(41) ತಂಡಕ್ಕೆ ನೆರವಾದರು.

ಭಾರತದ ಪರ ಕುಲ್ದೀಪ್ ಯಾದವ್ 115 ರನ್ ನೀಡಿ 4 ವಿಕೆಟ್ ಉರುಳಿಸಿದರೆ, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು.

ಮೊದಲ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಎರಡನೇ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೆ 9 ರನ್ ಗಳಿಸಿದೆ. 7 ರನ್ ಗಳಿಸಿರುವ ಯಶಸ್ವಿ ಜೈಸ್ವಾಲ್ ಮತ್ತು 2 ರನ್ ಗಳಿಸಿರುವ ಕೆ.ಎಲ್. ರಾಹುಲ್ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

ಮುಂದಿನ ಸುದ್ದಿ
Show comments