ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಇಂದು ತಂಡವನ್ನು ಪ್ರಕಟಿಸಿದೆ. ನಿರೀಕ್ಷೆಯಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ನಾಯಕತ್ವ ಒಲಿದಿದೆ.
ಗಾಯದ ಕಾರಣ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಶುಭಮನ್ ಗಿಲ್ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದ್ದು, ಕೆ.ಎಲ್.ರಾಹುಲ್ ಅವರಿಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನೊಳಗೊಂಡ ತಂಡಕ್ಕೆ ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ, ರವೀಂದ್ರ ಜಡೇಜಾ ಕೂಡ ತಂಡಕ್ಕೆ ಮರಳಿದ್ದಾರೆ.
ನಾಯಕ ಶುಭ್ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕುತ್ತಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ರಾಹುಲ್ ತಂಡ ಮುನ್ನಡೆಸಲಿದ್ದಾರೆ.
ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ ಉಪನಾಯಕನಾಗಿ ನೇಮಕಗೊಂಡಿದ್ದ ಶ್ರೇಯಸ್ ಅಯ್ಯರ್ ಕೂಡ ತಂಡದ ಭಾಗವಾಗಿಲ್ಲ. ಏಕೆಂದರೆ ಅವರು ಕಳೆದ ತಿಂಗಳು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅನುಭವಿಸಿದ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.
ರಿಷಭ್ ಪಂತ್ ಮತ್ತು ಋತುರಾಜ್ ಗಾಯಕ್ವಾಡ್ ಅವರೂ ತಂಡ ಸೇರಿದ್ದಾರೆ. ವೇಗದ ಬೌಲರ್ಗಳಾದ ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ಮತ್ತು ಅರ್ಷದೀಪ್ ಸಿಂಗ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ತಂಡ ಹೀಗಿದೆ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆ.ಎಲ್.ರಾಹುಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
ಪಂದ್ಯಗಳ ವೇಳಾಪಟ್ಟಿ: ಮೊದಲ ಏಕದಿನ ಪಂದ್ಯ: ನವೆಂಬರ್ 30 (ರಾಂಚಿ), ಎರಡನೇ ಏಕದಿನ ಪಂದ್ಯ: ಡಿಸೆಂಬರ್ 3 (ರಾಯ್‌ಪುರ), ಮೂರನೇ ಏಕದಿನ ಪಂದ್ಯ: ಡಿಸೆಂಬರ್ 6 (ವಿಶಾಖಪಟ್ಟಣಂ)