ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಏಕದಿನ ಸರಣಿಗೆ ಟೀಂ ಇಂಡಿಯಾ ನಾಯಕತ್ವ ಕನ್ನಡಿಗನ ಹೆಗಲಿಗೇರುವ ಸಾಧ್ಯತೆಯಿದೆ.
ಇದೀಗ ಟೆಸ್ಟ್ ಸರಣಿ ಜಾರಿಯಲ್ಲಿದ್ದು, ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ಶುಭಮನ್ ಗಿಲ್ ಕತ್ತು ನೋವಿನಿಂದಾಗಿ ಮೈದಾನ ತೊರೆದಿದ್ದರು. ಇತ್ತೀಚೆಗಿನ ವರದಿ ಪ್ರಕಾರ ಅವರು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲೂ ಅವರು ಆಡಲ್ಲ. ಮೂಲಗಳ ಪ್ರಕಾರ ಮುಂಬರುವ ಏಕದಿನ ಸರಣಿಗೂ ಅವರು ಲಭ್ಯರಿರುವುದು ಅನುಮಾನ.
ಹೀಗಾದಲ್ಲಿ ಟೀಂ ಇಂಡಿಯಾ ನಾಯಕನಾಗಿ ಕನ್ನಡಿಗ ಕೆಎಲ್ ರಾಹುಲ್ ಆಯ್ಕೆಯಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಉಪನಾಯಕ ಶ್ರೇಯಸ್ ಅಯ್ಯರ್ ಕೂಡಾ ಗಾಯಗೊಂಡು ಹೊರಗುಳಿದಿದ್ದಾರೆ. ಹೀಗಾಗಿ ತಂಡದಲ್ಲಿರುವ ಅನುಭವಿ ಎಂದರೆ ಕೆಎಲ್ ರಾಹುಲ್. ಈ ವಾರ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ರಾಹುಲ್ ಅವರೇ ನಾಯಕರಾಗುವ ಸಾಧ್ಯತೆ ಹೆಚ್ಚು. ನವಂಬರ್ 30 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಿದೆ.