ರಾಯ್‌ಪುರ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾ ಏಕದಿನ ಪಂದ್ಯಗಳಲ್ಲಿ ದಾಖಲೆಯ 20ನೇ ಬಾರಿ ಟಾಸ್ ಸೋತಿದೆ.
ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಭಾರತ ಮೊದಲ ಪಂದ್ಯವನ್ನು ಜಯಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
2023ರ ಏಕದಿನ ವಿಶ್ವಕಪ್ ಫೈನಲ್‌ನಿಂದ ಭಾರತ ಇದುವರೆಗೂ ಆಡಿದ ಎಲ್ಲಾ 20 ಏಕದಿನ ಪಂದ್ಯದಲ್ಲೂ ಟಾಸ್ ಗೆಲ್ಲಲು ವಿಫಲವಾಗಿದೆ. ಭಾರತ ಏಕದಿನ ತಂಡದ ನಾಯಕ ಶುಭ್ಮನ್ ಗಿಲ್ ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಸರಣಿಯಿಂದ ಹೊರಗುಳಿದಿದ್ದು, ಅವರ ಬದಲಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ದಕ್ಷಿಣ ಆಫ್ರಿಕಾ ತಂಡವು ಎರಡನೇ ಪಂದ್ಯದಲ್ಲಿ ಪ್ರಮುಖ 3 ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ತೆಂಬಾ ಬವುಮಾ ತಂಡ ಕೂಡಿಕೊಂಡಿದ್ದು, ಇದರ ಜತೆಗೆ ಅನುಭವಿ ಸ್ಪಿನ್ನರ್ ಕೇಶವ್ ಮಹರಾಜ್ ಹಾಗೂ ವೇಗಿ ಲುಂಗಿ ಎಂಗಿಡಿ ಕೂಡಾ ಹರಿಣಗಳ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆ ಎಲ್ ರಾಹುಲ್(ನಾಯಕ/ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಏಯ್ಡನ್ ಮಾರ್ಕ್‌ರಮ್, ತೆಂಬಾ ಬವುಮಾ(ನಾಯಕ), ಮ್ಯಾಥ್ಯೂ ಬ್ರೆಟ್‌ಕೀ, ಟೋರ್ನಿ ಡಿ ಜಾರ್ಝಿ, ಡೆವಾಲ್ಡ್ ಬ್ರೆವೀಸ್, ಮಾರ್ಕೊ ಯಾನ್ಸನ್, ಕಾರ್ಬಿನ್ ಬೋಷ್, ಕೇಶವ್ ಮಹರಾಜ್, ನಂದ್ರೆ ಬರ್ಗರ್, ಲುಂಗಿ ಎಂಗಿಡಿ.