ಕೋಲ್ಕತ್ತಾ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಳೆಯಿಂದ ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ನೋಡಿ.
ದಕ್ಷಿಣ ಆಫ್ರಿಕಾ 26 ವರ್ಷಗಳಿಂದ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಈಗ ಹಾಲಿ ಟೆಸ್ಟ್ ಚಾಂಪಿಯನ್ ಆದ ಬಳಿಕ ಆಫ್ರಿಕಾ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಆಡಲಿದೆ. ಹೀಗಾಗಿ ಈ ಬಾರಿ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ.
ಈ ಪಂದ್ಯಕ್ಕೆ ಸ್ಪಿನ್ ಸ್ನೇಹೀ ಪಿಚ್ ತಯಾರಿಸಲಾಗಿದೆ. ಹೀಗಾಗಿ ಭಾರತದ ಪರ ಕುಲದೀಪ್ ಯಾದವ್, ರವೀಂದ್ರ ಜಡೇಜಾ ಜೊತೆಗೆ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ನಿತೀಶ್ ಕುಮಾರ್ ರೆಡ್ಡಿಯನ್ನು ಈಗಾಗಲೇ ತಂಡದಿಂದ ರಿಲೀಸ್ ಮಾಡಲಾಗಿದೆ.
ಹೀಗಾಗಿ ಅಚ್ಚರಿಯೆಂಬಂತೆ ಈ ಪಂದ್ಯಕ್ಕೆ ರಿಷಭ್ ಪಂತ್ ಜೊತೆಗೆ ಮತ್ತೊಬ್ಬ ಸ್ಪೆಷಲಿಸ್ಟ್ ಕೀಪರ್ ಧ್ರುವ ಜ್ಯುರೆಲ್ ಕೂಡಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಧ್ರುವ ಜ್ಯುರೆಲ್ ದೇಶೀಯ ಕ್ರಿಕೆಟ್ ನಲ್ಲಿ ರನ್ ಗಳಿಸಿ ಅದ್ಭುತ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಅವರು ಸ್ಪೆಷಲಿಸ್ಟ್ ಬ್ಯಾಟರ್ ಆಗಿ ಸ್ಥಾನ ಪಡೆಯಬಹುದು.
ಉಳಿದಂತೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿರಬಹುದು. ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಸಾಯಿ ಸುದರ್ಶನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜ್ಯುರೆಲ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಆಕಾಶ್ ದೀಪ್/ಮೊಹಮ್ಮದ್ ಸಿರಾಜ್.