Publish Date: Wed, 19 Aug 2026 (14:18 IST)
Updated Date: Wed, 19 Aug 2026 (14:21 IST)
ಗಾಲೆ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 165 ರನ್ ಗಳ ಬೃಹತ್ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಕನ್ನಡಿಗ ದೇವದತ್ ಪಡಿಕ್ಕಲ್ ಗೆ ದೊಡ್ಡ ಗಿಫ್ಟ್ ಸಿಕ್ಕಿದೆ.
ಭಾರತ ಮೊದಲ ಇನಿಂಗ್ಸ್ ನಲ್ಲಿ 426 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಲಂಕಾ ಮೊದಲ ಇನಿಂಗ್ಸ್ ನಲ್ಲಿ 284 ರನ್ ಗಳಿಸಿತು. ಭಾರತ ದ್ವಿತೀಯ ಇನಿಂಗ್ಸ್ ನಲ್ಲಿ 193 ರನ್ ಗಳಿಸಿದರೆ ಲಂಕಾ ದ್ವಿತೀಯ ಇನಿಂಗ್ಸ್ ನಲ್ಲಿ206 ರನ್ ಗಳಿಗೆ ಆಲೌಟ್ ಆಯಿತು. ಲಂಕಾ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಸೋನಲ್ ದಿನುಶಾ ಹೋರಾಟದ 84 ರನ್ ಗಳಿಸಿದರು.
ಭಾರತದ ಪರ ಮಾನವ್ ಸುತಾರ್ 6 ವಿಕೆಟ್ ಕಬಳಿಸಿ ಗಮನ ಸೆಳೆದರು. ಆದರೆ ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಗೆ ಬಲ ನೀಡಿದ್ದು ಕನ್ನಡಿಗ ದೇವದತ್ ಪಡಿಕ್ಕಲ್. ಮೊದಲ ಇನಿಂಗ್ಸ್ ನಲ್ಲಿ 167 ರನ್ ಗಳಿಸಿದರೆ ಎರಡನೇ ಇನಿಂಗ್ಸ್ ನಲ್ಲಿ 44 ರನ್ ಗಳಿಸಿ ತಂಡಕ್ಕೆ ಭದ್ರ ಅಡಿಪಾಯ ನೀಡಿದರು. ಈ ಕಾರಣಕ್ಕೆ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ