ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೊಸ ದಾಖಲೆಯೊಂದನ್ನು ಮಾಡಿದೆ.
ವೆಸ್ಟ್ ಇಂಡೀಸ್ ಇತ್ತೀಚೆಗಿನ ದಿನಗಳಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ದುರ್ಬಲ ತಂಡವೆನಿಸಿಕೊಂಡಿದೆ. ಈ ಪಂದ್ಯದಲ್ಲೂ ಮೊದಲ ಇನಿಂಗ್ಸ್ ನಲ್ಲಿ 162 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ಇತ್ತೀಚೆಗಿನ ವರದಿ ಬಂದಾಗ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ಹೀಗಾಗಿ ಭಾರತ ಈಗ 30 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸಿದೆ.
ಇದರೊಂದಿಗೆ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಸತತ 12 ನೇ ಬಾರಿಗೆ ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸಿದಂತಾಗಿದೆ. ಇದು ವಿಶೇಷ ದಾಖಲೆಯೇ ಸರಿ. ಭಾರತದ ಪರ ನಾಯಕ ಶುಭಮನ್ ಗಿಲ್ 50 ರನ್ ಗಳಿಸಿ ಈಗಷ್ಟೇ ಔಟಾಗಿದ್ದು ಇದೀಗ ಕೆಎಲ್ ರಾಹುಲ್ 90 ರನ್ ಗಳಿಸಿ ಶತಕದ ಅಂಚಿನಲ್ಲಿದ್ದಾರೆ.
ಗಿಲ್ ಮತ್ತು ರಾಹುಲ್ ಮೂರನೇ ವಿಕೆಟ್ ಗೆ ಉತ್ತಮ ಜೊತೆಯಾಟವಾಡಿ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿದ್ದಾರೆ. ಇದಕ್ಕೆ ಮೊದಲು ಜೈಸ್ವಾಲ್ 36, ಸಾಯಿ ಸುದರ್ಶನ್ 7 ರನ್ ಗಳಿಸಿ ಔಟಾಗಿದ್ದರು.