ದೆಹಲಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ತಂಡದ ಪ್ಲೇಯಿಂಗ್ ಇಲೆವೆನ್ ವಿವರ ಇಲ್ಲಿದೆ.
ಕಳೆದ ಪಂದ್ಯದಲ್ಲಿ ಗೆದ್ದ ಟೀಂ ಇಂಡಿಯಾ ಈಗ ಸರಣಿಯಲ್ಲಿ 1-0 ರಿಂದ ಮುನ್ನಡೆಯಲ್ಲಿದ್ದು ಈ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಗುರಿ ಹೊಂದಿದೆ. ಸದ್ಯಕ್ಕೆ ವಿಂಡೀಸ್ ಫಾರ್ಮ್ ಗಮನಿಸಿದರೆ ಇದು ಅಸಾಧ್ಯವೇನೂ ಅಲ್ಲ ಎನಿಸುತ್ತದೆ.
ಇಂದು ಟಾಸ್ ಗೆದ್ದ ಶುಭಮನ್ ಗಿಲ್ ಇದೇ ಮೊದಲ ಬಾರಿಗೆ ನಾಯಕನಾಗಿ ಟಾಸ್ ಗೆದ್ದ ವಿಶಿಷ್ಟ ದಾಖಲೆ ಮಾಡಿದರು. ಇದಕ್ಕೆ ಮೊದಲು ಗಿಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಿದ್ದರು. ಆದರೆ ಎಲ್ಲಾ ಐದೂ ಪಂದ್ಯಗಳಲ್ಲಿ ಅವರು ಟಾಸ್ ಸೋತಿದ್ದರು.
ಕಳೆದ ಪಂದ್ಯದಲ್ಲೂ ಅವರಿಗೆ ಟಾಸ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೀಗ ನಾಯಕನಾದ ಬಳಿಕ ಮೊದಲ ಬಾರಿಗೆ ಟಾಸ್ ಗೆದ್ದು ಈ ರೀತಿ ಟಾಸ್ ಗೆಲ್ಲದೆಯೇ ನಾಯಕನಾಗಿ ಅತೀ ಹೆಚ್ಚು ಬಾರಿ ತಂಡ ಮುನ್ನಡೆಸಿದ ಭಾರತದ ಮೊದಲ ನಾಯಕ ಎನಿಸಿದರು.
ಇನ್ನು ಈ ಪಂದ್ಯದಲ್ಲಿ ಭಾರತ ಯಾವುದೇ ಬದಲಾವಣೆಯಿಲ್ಲದೇ ಕಣಕ್ಕಿಳಿದಿದೆ.
ಭಾರತ ತಂಡ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಧ್ರುವ ಜ್ಯುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.